ದುಬೈಗೆ ಪರಾರಿಯಾಗಿದ್ದ ಅತ್ಯಾಚಾರ ಆರೋಪಿ ಕೊನೆಗೂ ಬಂಧನ
ಮೂರು ವರ್ಷಗಳಿಂದ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ದುಬೈನಲ್ಲಿ ತಲೆಮರೆಸಿಕೊಂಡಿದ್ದ ಸಾಫ್ಟ್ ವೇರ್ ಉದ್ಯೋಗಿಯೊಬ್ಬನನ್ನು ಇಂಟರ್‌ಪೋಲ್ ನೆರವು ಪಡೆದು ಮಹದೇವಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಮೂರು ವರ್ಷಗಳಿಂದ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ದುಬೈನಲ್ಲಿ ತಲೆಮರೆಸಿಕೊಂಡಿದ್ದ ಸಾಫ್ಟ್ ವೇರ್ ಉದ್ಯೋಗಿಯೊಬ್ಬನನ್ನು ಇಂಟರ್‌ಪೋಲ್ ನೆರವು ಪಡೆದು ಮಹದೇವಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಕೇರಳ ಮೂಲದ ಮಿಧುನ್ ಚಂದ್ರ ಬಂಧಿತ ಆರೋಪಿ. ಆರೋಪಿಯನ್ನು ಬಂಧಿಸಲು ಇಂಟರ್‌ಪೋಲ್ ನೆರವು ಕೋರಿ ಕರ್ನಾಟಕ ಪೊಲೀಸರು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಪತ್ರ ಬರೆದಿದ್ದರು. ಇದರಂತೆ ಮಿಧುನ್ ವಿರುದ್ಧ ಜನವರಿಯಲ್ಲಿ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು.
ಆರೋಪಿ ತನ್ನ ಗೆಳತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಆಕೆಗೆ ವಂಚಿಸಿದ್ದ. ಈ ಸಂಬಂಧ 2020ರಲ್ಲಿ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಪ್ರಕರಣದಡಿ ಆತನನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದರು. ಆದರೆ, ಜಾಮೀನು ಪಡೆದು ಜೈಲಿನಿಂದ ಹೊರಬಂದ ಆರೋಪಿ, ನಂತರ ನಗರ ತೊರೆದು ದುಬೈಗೆ ಪರಾರಿಯಾಗಿದ್ದ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


