Garlic Price: ಈರುಳ್ಳಿ ನಂತರ ಈಗ ಬೆಳ್ಳುಳ್ಳಿ ಬೆಲೆಯಲ್ಲಿ ಏರಿಕೆ: ಪ್ರತಿ ಕೆಜಿ 400 ರೂ. ಗೆ ಏರಿಕೆ
ಈರುಳ್ಳಿ ನಂತರ ಬೆಳ್ಳುಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ 300 ರಿಂದ 400 ರೂ.ಗೆ ತಲುಪಿದೆ. ಒಂದು ತಿಂಗಳಲ್ಲಿ ಬೆಳ್ಳುಳ್ಳಿ ಬೆಲೆ ಸುಮಾರು ಎರಡು ಪಟ್ಟು ಹೆಚ್ಚಾಗಿದೆ.

ಬೆಂಗಳೂರು: ಈರುಳ್ಳಿ ನಂತರ ಬೆಳ್ಳುಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ 300 ರಿಂದ 400 ರೂ.ಗೆ ತಲುಪಿದೆ. ಒಂದು ತಿಂಗಳಲ್ಲಿ ಬೆಳ್ಳುಳ್ಳಿ ಬೆಲೆ ಸುಮಾರು ಎರಡು ಪಟ್ಟು ಹೆಚ್ಚಾಗಿದೆ.
ಒಂದು ತಿಂಗಳ ಹಿಂದೆ ಚಿಲ್ಲರೆ ಬೆಲೆ ಕೆಜಿಗೆ 200 ರಿಂದ 250 ರೂಪಾಯಿ ಇತ್ತು. ಈ ವರ್ಷ ಬೆಳ್ಳುಳ್ಳಿ ಬೆಳೆ ಕೈಕೊಟ್ಟಿದ್ದರಿಂದ ಬೆಲೆ ಏರಿಕೆಯಾಗಿದೆ.
ಬೆಳ್ಳುಳ್ಳಿ ಬೆಲೆ ಏರಿಕೆಗೆ ಎರಡು ಕಾರಣಗಳಿವೆ. ಮೊದಲನೆಯದು- ಹವಾಮಾನ ವೈಪರೀತ್ಯದಿಂದ ಬೆಳ್ಳುಳ್ಳಿ ಬೆಳೆ ಹಾಳಾಗಿದೆ. ಎರಡನೆಯ ಕಾರಣ ಕಡಿಮೆ ಉತ್ಪಾದನೆಯಿಂದಾಗಿ, ಮಾರುಕಟ್ಟೆಗಳಲ್ಲಿ ಬೆಳ್ಳುಳ್ಳಿಯ ಪೂರೈಕೆಯಲ್ಲಿ ಭಾರಿ ಕಡಿತ ಕಂಡುಬಂದಿದೆ.
ಇದರಿಂದಾಗಿ ಅದರ ಬೆಲೆ ಹೆಚ್ಚಾಗಿದೆ. ನಾಸಿಕ್ ಮತ್ತು ಪುಣೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ಉತ್ಪಾದಿಸಲಾಗುತ್ತದೆ. ಹೊಸ ಬೆಳೆ ಮಾರುಕಟ್ಟೆಗೆ ಬರಲು ಸಮಯ ಹಿಡಿಯಲಿದ್ದು ಅಲ್ಲಿಯವರೆಗೆ ಬೆಲೆಗಳು ಹೆಚ್ಚಾಗುವ ನಿರೀಕ್ಷೆಯಿದೆ.
ಬೆಳ್ಳುಳ್ಳಿಯ ಕೊರತೆಯಿಂದಾಗಿ, ಕಳೆದ ಕೆಲವು ವಾರಗಳಲ್ಲಿ ಅದರ ಬೆಲೆ ಹೆಚ್ಚಾಗಿದೆ. ಈ ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುವ ಸಾಧ್ಯತೆಯಿಲ್ಲ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ. ಬೆಳ್ಳುಳ್ಳಿ ಬೆಲೆ ಏರಿಕೆ ಗ್ರಾಹಕರ ಕೈ ಸುಡಲಿದೆ.
ಬೀದರ್ ನಲ್ಲಿ ಬೆಳ್ಳುಳ್ಳಿ ಬೆಲೆ 400 ರುಪಾಯಿ ಇದ್ದು ಬೆಂಗಳೂರಿನಲ್ಲಿ 300 ರಿಂದ 350 ರೂಪಾಯಿ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


