ಮಂಗಳೂರು: ಅಕ್ರಮ ಮದ್ಯದ ಅಡ್ಡೆ ಮೇಲೆ ದಾಳಿ, 222 ನಕಲಿ ಲಿಕ್ಕರ್ ಜಪ್ತಿ
ಕೇರಳ-ಕರ್ನಾಟಕ ಗಡಿ ಭಾಗದ ತಲಪಾಡಿಯ ಕಿನ್ಯಾ ಗ್ರಾಮದ ಸಂತ್ಯಾಗುತ್ತು ಬಳಿ ಅಕ್ರಮ ಮದ್ಯದ ಅಡ್ಡೆಯ ಮೇಲೆ 25ಕ್ಕೂ ಹೆಚ್ಚು ಅಬಕಾರಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.

ಮಂಗಳೂರು: ಕೇರಳ-ಕರ್ನಾಟಕ ಗಡಿ ಭಾಗದ ತಲಪಾಡಿಯ ಕಿನ್ಯಾ ಗ್ರಾಮದ ಸಂತ್ಯಾಗುತ್ತು ಬಳಿ ಅಕ್ರಮ ಮದ್ಯದ ಅಡ್ಡೆಯ ಮೇಲೆ 25ಕ್ಕೂ ಹೆಚ್ಚು ಅಬಕಾರಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ, ಅಕ್ರಮವಾಗಿ ಸಾರಾಯಿ ತಯಾರಿಸುತ್ತಿದ್ದ ನಿತ್ಯಾನಂದ ಭಂಡಾರಿ ಎಂಬಾತನ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ಅಬಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಾಳಿ ವೇಳೆ 2240 ಲೀಟರ್ ಸ್ಪಿರಿಟ್ ಹಾಗೂ 222 ಲೀಟರ್ ನಕಲಿ ಲಿಕ್ಕರ್ ಹಾಗೂ ಅದಕ್ಕೆ ಬಳಸಿದ್ದ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ತಯಾರಿಸಿದ ದೇಶಿ ನಿರ್ಮಿತ ಮದ್ಯವನ್ನು ನೆರೆಯ ಕೇರಳಕ್ಕೆ ಸರಬರಾಜು ಮಾಡಲಾಗುತ್ತಿತ್ತು. ದಾಳಿ ವೇಳೆ ಆರೋಪಿ ಭಂಡಾರಿ ಪರಾರಿಯಾಗಿದ್ದಾನೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
ಅಬಕಾರಿ ಇಲಾಖೆ ಮಂಗಳೂರು ವಿಭಾಗದ ಜಂಟಿ ನಿರ್ದೇಶಕ ನಾಗರಾಜಪ್ಪ ಟಿ ಮತ್ತು ಅಬಕಾರಿ ಉಪ ಆಯುಕ್ತ ಟಿ ಎಂ ಶ್ರೀನಿವಾಸ್ ಅವರ ನಿರ್ದೇಶನದಂತೆ ದಾಳಿ ನಡೆಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


