ಬೆಂಗಳೂರು: ರಜೆ ನೀಡದ್ದಕ್ಕೆ ನೊಂದ ಕಾರ್ಮಿಕ ಆತ್ಮಹತ್ಯೆಗೆ ಶರಣು
ಫ್ಯಾಕ್ಟರಿಯಲ್ಲಿ ರಜೆ ನೀಡಲಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವಕನೊಬ್ಬ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಫ್ಯಾಕ್ಟರಿಯಲ್ಲಿ ರಜೆ ನೀಡಲಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವಕನೊಬ್ಬ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗೋವಿಂದರಾಜ್ (24) ಆತ್ಮಹತ್ಯೆಗೆ ಶರಣಾದ ಯುವಕ. ಈತ ಪೀಣ್ಯದಲ್ಲಿರುವ ಗಡಿಯಾರ ತಯಾರಿಕೆ ಕಂಪನಿಯೊಂದರಲ್ಲಿ ಕಳೆದ 5 ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಅವರ ತಾಯಿ, ಟಿ. ದಾಸರಹಳ್ಳಿ ಬಳಿಯ ಅಪಾರ್ಟ್‌ಮೆಂಟ್ ಸಮುಚ್ಚಯವೊಂದರಲ್ಲಿ ಸ್ವಚ್ಛತೆ ಕೆಲಸ ಮಾಡುತ್ತಿದ್ದರು. ಅಲ್ಲಿಯೇ ಕೊಠಡಿಯೊಂದರಲ್ಲಿ ತಾಯಿ ಜೊತೆ ಗೋವಿಂದರಾಜ್ ವಾಸವಿದ್ದರು ಎಂದು ತಿಳಿದುಬಂದಿದೆ.
ಕಾರ್ಖಾನೆಯಲ್ಲಿ ಕೆಲಸ ಮುಗಿದ ಬಳಿಕ ಗೋವಿಂದರಾಜ್ ಅಪಾರ್ಟ್ ಮೆಂಟ್ ವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಇದೇ ಕಟ್ಟಡದ ಮಹಡಿ ಮೇಲೆ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆತ್ಮಹತ್ಯೆಗೂ ಮುನ್ನ ಗೋವಿಂದರಾಜ್ ಡೆತ್ ನೋಟ್ ಬರೆದಿಟ್ಟಿದ್ದು, ಪತ್ರದಲ್ಲಿ ಕಾರ್ಖಾನೆಯ ವ್ಯವಸ್ಥಾಪಕ ಗುರುರಾಜ್ ಹಾಗೂ ಮೇಲ್ವಿಚಾರಕ ರಂಜಪ್ಪ ಹೆಸರನ್ನು ನಮೂದಿಸಿದ್ದಾರೆ.
‘ಕಂಪನಿಯ ವ್ಯವಸ್ಥಾಪಕ ಗುರುರಾಜಪ್ಪ ಹಾಗೂ ಮೇಲ್ವಿಚಾರಕ ನಂಜಪ್ಪ, ನನಗೆ ರಜೆ ನೀಡುತ್ತಿರಲಿಲ್ಲ. ಕೆಲಸದ ಸ್ಥಳದಲ್ಲಿ ಕಿರುಕುಳ ನೀಡುತ್ತಿದ್ದರು. ರಜೆ ಕೇಳಿದ್ದಕ್ಕೆ, ಕೆಲಸದಿಂದ ತೆಗೆಯುವುದಾಗಿ ಬೆದರಿಸಿದ್ದರು. ಹೀಗಾಗಿ ನೊಂದು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆಂದು ಹೇಳಿಕೊಂಡಿದ್ದಾನೆ.
ಈ ಸಂಬಂಧ ಬಾಗಲಗುಂಟೆ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


