ಭ್ರೂಣ ಹತ್ಯೆ: ಸುಳಿವು ಕೊಟ್ಟರೆ 1 ಲಕ್ಷ ರೂ. ನಗದು ಬಹುಮಾನ; ಆರೋಗ್ಯ ಇಲಾಖೆ ಘೋಷಣೆ
ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ ರೂ. 1 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಇದಲ್ಲದೇ ಸುಳಿವು ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ ರೂ. 1 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಇದಲ್ಲದೇ ಸುಳಿವು ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ.
ರಾಜ್ಯದ ಯಾವುದೇ ಭಾಗದ ಆಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಸ್ಪಷ್ಟವಾಗಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದವರಿಗೆ ಒಂದು ಲಕ್ಷಣ ರೂಪಾಯಿ ಬಹುಮಾನ ಹಣ ನೀಡುತ್ತೇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಸಾರ್ವಜನಿಕರ ಸಹಾಯಕ್ಕಾಗಿ ಆರೋಗ್ಯ ಇಲಾಖೆ ಸಹಾಯವಾಣಿ ತೆರೆದಿದ್ದು, 080-25202264/65ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದೆ.
ಹೆಣ್ಣು ಭ್ರೂಣ ಹತ್ಯೆ ತಡೆಗೆ ರಾಜ್ಯ ಸರ್ಕಾರ ಕಾನೂನು ತಿದ್ದುಪಡಿ, ರಾಜ್ಯಮಟ್ಟದ ಕಾರ್ಯಪಡೆ ರಚನೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಲಿಂಗ ಪತ್ತೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸಚಿವರು, ಕಳೆದ ವರ್ಷ 1,000 ಪುರುಷರಿಗೆ 947 ಮಹಿಳೆಯರಿದ್ದರು. ಈ ವರ್ಷ 929 ಇದ್ದಾರೆ. ಮಹಿಳೆಯರ ಸಂಖ್ಯೆ ಕಡಿಮೆಯಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


