ಸಂಸತ್ ಭದ್ರತಾ ಲೋಪ: ಮನೋರಂಜನ್ ಡೈರಿಯಲ್ಲಿ ಹೆಸರು, ಬಾಗಲಕೋಟೆಯ ಸಾಯಿಕೃಷ್ಣ ದೆಹಲಿ ಪೊಲೀಸ್ ವಶಕ್ಕೆ!
ಸಂಸತ್ ಭದ್ರತಾ ಲೋಪ ಪ್ರಕರಣದ ತನಿಖೆ ತೀವ್ರಗೊಳಿಸಿರುವ ದೆಹಲಿ ಪೊಲೀಸರು ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಮೈಸೂರು ಮೂಲದ ಮನೋರಂಜನ್ ಸಹಪಾಠಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ.

ಬಾಗಲಕೋಟೆ: ಸಂಸತ್ ಭದ್ರತಾ ಲೋಪ ಪ್ರಕರಣದ ತನಿಖೆ ತೀವ್ರಗೊಳಿಸಿರುವ ದೆಹಲಿ ಪೊಲೀಸರು ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಮೈಸೂರು ಮೂಲದ ಮನೋರಂಜನ್ ನ ಸಹಪಾಠಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ.
ಬಾಗಲಕೋಟೆ ಮೂಲದ ಸಾಯಿಕೃಷ್ಣ ಎಂಬಾತನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಯಿಕೃಷ್ಣ ಬಾಗಲಕೋಟೆ ನಿವೃತ್ತ ಡಿವೈಎಸ್ ಪಿ ವಿಠಲ ಜಗಲಿ ಅವರ ಪುತ್ರ ಎಂದು ತಿಳಿದುಬಂದಿದೆ. ಸಾಯಿಕೃಷ್ಣ ಆರೋಪಿ ಮನೋರಂಜನ್ ಸ್ನೇಹಿತನಾಗಿದ್ದು, ಬೆಂಗಳೂರಿನ ಬಿಐಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಹಪಾಠಿಯಾಗಿದ್ದರು.
ದೆಹಲಿ ಪಿಎಸ್ಐ ಪಿಂಟು ಶರ್ಮಾ ಹಾಗೂ ನಾಲ್ಕು ಜನರ ತಂಡ ಇಂದು ಸಂಜೆ 7 ಗಂಟೆ ವೇಳೆಗೆ ಬಾಗಲಕೋಟೆಯಲ್ಲಿರುವ ವಿದ್ಯಾಗಿರಿ ಮನೆಗೆ ಭೇಟಿ ನೀಡಿ ಸಾಯಿಕೃಷ್ಣನನ್ನು ವಶಕ್ಕೆ ಪಡೆದರು. ನಂತರ ನವನಗರ ಠಾಣೆಯಲ್ಲಿ ಕೆಲ ಕಾಲ ವಿಚಾರಣೆ ನಡೆಸಿ ದೆಹಲಿಗೆ ಕರೆದೊಯ್ದರು ಎಂದು ತಿಳಿದುಬಂದಿದೆ.
2008 -2009ರ ಅವಧಿಯಲ್ಲಿ ಮನೋರಂಜನ್ ಮತ್ತು ಸಾಯಿಕೃಷ್ಣ ರೂಮ್ ಮೇಟ್ ಆಗಿದ್ದರು. 2012ರಲ್ಲಿ ದೆಹಲಿಗೆ ಹೋಗಿದ್ದ ಮನೋರಂಜನ್ ಡೈರಿಯಲ್ಲಿ ಸಾಯಿಕೃಷ್ಣ ಹೆಸರು ಬರೆದಿದ್ದನಂತೆ. ಹೀಗಾಗಿ ಪೊಲೀಸರು ಸಾಯಿಕೃಷ್ಣನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಎನ್ರಿಚ್ ವಿಡಿಯೊ ಕಂಪನಿ ಸೀನಿಯರ್ ಸಾಪ್ಟವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಾಯಿಕೃಷ್ಣ ವರ್ಕ್ ಫ್ರಮ್ ಹೋಮ್ ನಿಂದಾಗಿ ಬಾಗಲಕೋಟೆಯ ತಮ್ಮ ಮನೆಯಿಂದಲೇ ಕೆಲಸ ಮಾಡುತ್ತಿದ್ದನು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


