ರಾಜ್ಯ

ನಗರದಲ್ಲಿ ಮತ್ತೊಂದು ಗ್ಯಾಸ್ ಗೀಸರ್ ದುರಂತ: ವಿಷಾನಿಲ ಸೋರಿಕೆಯಾಗಿ ಯುವತಿ ಸಾವು

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಗೀಸರ್ ಗ್ಯಾಸ್​ ಸೋರಿಕೆಯಾಗಿ ಮಹಿಳೆ ಸಾವನ್ನಪ್ಪಿದ್ದರು, ಈ ಘಟನೆಯ ಬೆನ್ನಲ್ಲೇ ಇಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ.

ನಗರದಲ್ಲಿ ಮತ್ತೊಂದು ಗ್ಯಾಸ್ ಗೀಸರ್ ದುರಂತ: ವಿಷಾನಿಲ ಸೋರಿಕೆಯಾಗಿ ಯುವತಿ ಸಾವು
ಮೃತ ಯುವತಿ ರಾಜೇಶ್ವರಿ.
Published On :

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಗೀಸರ್ ಗ್ಯಾಸ್​ ಸೋರಿಕೆಯಾಗಿ ಮಹಿಳೆ ಸಾವನ್ನಪ್ಪಿದ್ದರು, ಈ ಘಟನೆಯ ಬೆನ್ನಲ್ಲೇ ಇಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ.

ಗೀಸರ್ ಗ್ಯಾಸ್​​ ಸೋರಿಕೆಯಾಗಿ ಯುವತಿ ಸಾವನ್ನಪ್ಪಿದ ಘಟನೆ ಬಸವೇಶ್ವರ ನಗರದ ಕೃಷ್ಣ ಕಲ್ಯಾಣ ಮಂಟಪ ಬಳಿ ನಡೆದಿದೆ.

ರಾಜೇಶ್ವರಿ (23) ಮೃತ ಯುವತಿ. ಡಿಸೆಂಬರ್ 20 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಡಿಸೆಂಬರ್ 20 ಮಧ್ಯಾಹ್ನ 1.45 ರಿಂದ 2 ಗಂಟೆ ಸುಮಾರಿಗೆ ಸ್ನಾನಕ್ಕೆ ತೆರಳಿದ್ದ ರಾಜೇಶ್ವರಿ ಬಹಳ ಸಮಯವಾದರೂ ಹೊರಗಡೆ ಬಂದಿರಲಿಲ್ಲ. ನಂತರ ಮನೆಯವರು ಬಾಗಿಲು ತೆಗೆದು ನೋಡಿದಾಗ ರಾಜೇಶ್ವರಿ ತೀವ್ರ ಅಸ್ವಸ್ಥಳಾಗಿ ಕೆಳಗೆ ಬಿದ್ದಿುವುದು ಕಂಡು ಬಂದಿದೆ.

ಕೂಡಲೇ ಆಕೆಯನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಧೃಡಪಡಿಸಿದ್ದಾರೆ. ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.