ಕೋವಿಡ್ ಪ್ರಕರಣ ಹೆಚ್ಚಳ: ಹೊಸ ವರ್ಷಾಚರಣೆ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಕೋವಿಡ್-19 ಮತ್ತು ಜೆಎನ್.1 ಉಪತಳಿ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಯನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.

ಬೆಂಗಳೂರು: ಕೋವಿಡ್-19 ಮತ್ತು ಜೆಎನ್.1 ಉಪತಳಿ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಯನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.
ಈ ಪಿಐಎಲ್ ಅನ್ನು ಹಿರಿಯ ವಕೀಲ ಎನ್.ಪಿ. ಅಮೃತೇಶ್ ಸಲ್ಲಿಸಿದ್ದರು.
ನ್ಯಾಯಮೂರ್ತಿಗಳಾದ ಆರ್. ನಟರಾಜ್ ಮತ್ತು ಕೆವಿ ಅರವಿಂದ್ ಅವರಿದ್ದ ವಿಭಾಗೀಯ ಪೀಠ ಹೊಸ ವರ್ಷಾಚರಣೆಗೆ ನಿಷೇಧ ಹೇರಲು ನಿರಾಕರಿಸಿದರು ಮತ್ತು ನಿಷೇಧ ಹೇರಿದರೆ ಜನರು ಬೆಂಗಳೂರಿನಿಂದ ಹೊರಗೆ ಹೋಗುತ್ತಾರೆ ಎಂದು ಅಭಿಪ್ರಾಯಪಟ್ಟರು.
ಈ ನಿಟ್ಟಿನಲ್ಲಿ ಸರ್ಕಾರ ಯಾವುದೇ ಮಾರ್ಗಸೂಚಿ ಮತ್ತು ನಿರ್ಬಂಧಗಳನ್ನು ಹೊರಡಿಸಿಲ್ಲ. ಸದ್ಯಕ್ಕೆ ಕೋವಿಡ್-19 ಬಗ್ಗೆ ಭಯಪಡುವಂತಹ ಯಾವುದೇ ಪರಿಸ್ಥಿತಿ ಇಲ್ಲ.
ಪ್ರಕರಣವನ್ನು ಜನವರಿಗೆ ಮುಂದೂಡಲಾಯಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ 103 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ.
ಕೋವಿಡ್ ಪಾಸಿಟಿವಿಟಿ ದರವು ಶೇ 1.41 ರಷ್ಟಿದೆ. 19 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ 80 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ನಗರದಲ್ಲಿ 380 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ 34 ಜೆಎನ್.1 ಪ್ರಕರಣಗಳಿದ್ದು, ಬೆಂಗಳೂರಿನಲ್ಲಿ 20 ಜೆಎನ್.1 ಪ್ರಕರಣಗಳು ದಾಖಲಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


