ರಾಜ್ಯ

ಬೆಂಗಳೂರಿನ ವರ್ತೂರಿನ ಅಪಾರ್ಟ್ ಮೆಂಟಿನಲ್ಲಿ ಬಾಲಕಿ ಸಾವಿಗೆ ಟ್ವಿಸ್ಟ್: ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಮೃತ್ಯು ಎಂದು ತಂದೆಯಿಂದ ದೂರು

ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ಆರಂಭದಲ್ಲಿ ಆರೋಪಿಸಲಾಗಿದ್ದ ಕೇಸಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇಂದು ಶುಕ್ರವಾರ ಬೆಳಗ್ಗೆ ಬಾಲಕಿ ಅಪಾರ್ಟ್ ಮೆಂಟಿನ ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ಬಾಲಕಿಯ ತಂದೆ ಪೊಲೀಸರಿಗೆ ಇಂದು ಶುಕ್ರವಾರ ದೂರು ನೀಡಿದ್ದು, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸತ್ಯ ಹೊರಬರಬೇಕಿದೆ.

ಬೆಂಗಳೂರಿನ ವರ್ತೂರಿನ ಅಪಾರ್ಟ್ ಮೆಂಟಿನಲ್ಲಿ ಬಾಲಕಿ ಸಾವಿಗೆ ಟ್ವಿಸ್ಟ್: ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಮೃತ್ಯು ಎಂದು ತಂದೆಯಿಂದ ದೂರು
ಸಾಂಕೇತಿಕ ಚಿತ್ರ
Published On :

ಬೆಂಗಳೂರು: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ಆರಂಭದಲ್ಲಿ ಆರೋಪಿಸಲಾಗಿದ್ದ ಕೇಸಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇಂದು ಶುಕ್ರವಾರ ಬೆಳಗ್ಗೆ ಬಾಲಕಿ ಅಪಾರ್ಟ್ ಮೆಂಟಿನ ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ಬಾಲಕಿಯ ತಂದೆ ಪೊಲೀಸರಿಗೆ ಇಂದು ಶುಕ್ರವಾರ ದೂರು ನೀಡಿದ್ದು, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸತ್ಯ ಹೊರಬರಬೇಕಿದೆ.

ನಡೆದಿರುವ ಘಟನೆಯೇನು?: ಕಳೆದ ತಿಂಗಳು ಕಾಡುಗೋಡಿಯಲ್ಲಿ ವಿದ್ಯುತ್​ ತಂತಿ ತಗುಲಿ ತಾಯಿ-ಮಗು ಸಾವಿಗೀಡಾಗಿದ್ದ ಪ್ರಕರಣ ಮಾಸುವ ಮುನ್ನವೇ ವರ್ತೂರಿನ ಪ್ರೆಸ್ಟೀಜ್ ಹೆಬಿಟೇಡ್ ಅಪಾರ್ಟ್​ಮೆಂಟ್​ನಲ್ಲಿ ವಾಸವಿದ್ದ 10 ವರ್ಷದ ಮಾನ್ಯ ಎಂಬ ಬಾಲಕಿ ವಿದ್ಯುತ್ ಸ್ಪರ್ಶದಿಂದ ಸಾವೀಗಿಡಾಗಿದ್ದಾಳೆ ಎಂದು ಹೇಳಲಾಗಿತ್ತು. 

ನಿನ್ನೆ ಸಾಯಂಕಾಲ 7.30 ರ ಸುಮಾರಿಗೆ ಬಾಲಕಿ ಮಾನ್ಯ ಅಪಾರ್ಟ್ ಮೆಂಟಿನ ಸ್ವಿಮಿಂಗ್ ಪೂಲ್ ಬಳಿ ಆಟವಾಡುತಿದ್ದಳು. ಈ ವೇಳೆ ಮಾನ್ಯ ಸ್ವಿಮಿಂಗ್ ಪೂಲ್ ಗೆ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಮಾಹಿತಿ ಸಿಕ್ಕಿದ ತಕ್ಷಣ ಅಪಾರ್ಟ್ ಮೆಂಟ್ ನಿವಾಸಿಗಳು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪ್ರಕರಣ ಸಂಬಂಧ ಮೃತ ಮಾನ್ಯ ತಂದೆ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಾಲಕಿ ಸಾವಿಗೆ ಅಪಾರ್ಟ್ ಮೆಂಟ್ ನಿರ್ವಹಣಾ ಸಿಬ್ಬಂದಿಗಳ ಬೇಜವಾಬ್ದಾರಿ ಕಾರಣವೆಂದು ನಿವಾಸಿಗಳು ಆರೋಪ ಮಾಡಿದ್ದಾರೆ. ನಿರ್ವಹಣಾ ಸಿಬ್ಬಂದಿಗಳ ವಿರುದ್ಧ ರಾತ್ರಿಯಿಡೀ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.