ಬೆಂಗಳೂರು: ಹೊಸ ವರ್ಷ ಸ್ವಾಗತಿಸಲು ಎಂಜಿ ರಸ್ತೆಗೆ ಹರಿದುಬಂದ ಜನಸಾಗರ- ವಿಡಿಯೋ
2023ಕ್ಕೆ ವಿದಾಯ ಹೇಳಿ, 2024 ಸ್ವಾಗತಿಸಲು ಕ್ಷಣಗಣನೆ ಆರಂಭವಾಗಿರುವಂತೆಯೇ ನಗರದ ಹೃದಯ ಭಾಗ ಮಹಾತ್ಮ ಗಾಂಧಿ ರಸ್ತೆಗೆ ಜನಸಾಗರವೇ ಹರಿದುಬಂದಿದೆ.

ಬೆಂಗಳೂರು: 2023ಕ್ಕೆ ವಿದಾಯ ಹೇಳಿ, 2024 ಸ್ವಾಗತಿಸಲು ಕ್ಷಣಗಣನೆ ಆರಂಭವಾಗಿರುವಂತೆಯೇ ನಗರದ ಹೃದಯ ಭಾಗ ಮಹಾತ್ಮ ಗಾಂಧಿ ರಸ್ತೆಗೆ ಜನಸಾಗರವೇ ಹರಿದುಬಂದಿದೆ.
ಹೊಸ ವರ್ಷ ಸಂಭ್ರಮಾಚರಣೆಗಾಗಿ ಬ್ರಿಗೇಡ್ ರಸ್ತೆ, ಎಂಜಿ ರಸ್ತೆ ಸುತ್ತಮುತ್ತಲಿನ ಕಟ್ಟಡಗಳು, ವಾಣಿಜ್ಯ ಮಳಿಗೆಗಳು ವಿದ್ಯುತ್ ದೀಪಗಳಿಂದ ಝಗಮಗಿಸುತ್ತಿದ್ದು, ನಗರದ ವಿವಿಧೆಡೆಯಿಂದ ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.
ಕೋವಿಡ್ ಜೆಎನ್-1 ರೂಪಾಂತರಿ ಉಲ್ಬಣದ ನಡುವೆಯೂ ಕಾಲಿಡಲು ಜಾಗವಿಲ್ಲದಂತೆ ಯುವ ಜನತೆ ನೆರೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ನಿಯೋಜಿಸಿದ್ದಾರೆ. ಮತ್ತೊಂದೆಡೆ ಮೆಟ್ರೋ ರೈಲಿನಲ್ಲಿ 11 ಗಂಟೆ ಸುಮಾರಿನಲ್ಲಿಯೂ ಕಾಲಿಡಲು ಜಾಗವಿಲ್ಲದಷ್ಟು ಪ್ರಯಾಣಿಕರು ಕಂಡುಬಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


