ರಾಜ್ಯ

ಹಾಸನ: ತುಂಡುಡುಗೆ ಧರಿಸುತ್ತಿದ್ದ ಪತ್ನಿಯ ಹತ್ಯೆಗೈದ ಪತಿ; ಪ್ರೇಮ ವಿವಾಹದ ದುರಂತ ಅಂತ್ಯ!

ಬಟ್ಟೆ ಧರಿಸುವ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ. ಪತಿಯೇ ತನ್ನ ಪತ್ನಿಯನ್ನ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.

ಹಾಸನ: ತುಂಡುಡುಗೆ ಧರಿಸುತ್ತಿದ್ದ ಪತ್ನಿಯ ಹತ್ಯೆಗೈದ ಪತಿ; ಪ್ರೇಮ ವಿವಾಹದ ದುರಂತ ಅಂತ್ಯ!
ಕೊಲೆಯಾದ ಜ್ಯೋತಿ ಮತ್ತು ಆಕೆಯ ಪತಿ ಜೀವನ್
Published On :

ಹಾಸನ: ಬಟ್ಟೆ ಧರಿಸುವ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ. ಪತಿಯೇ ತನ್ನ ಪತ್ನಿಯನ್ನ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.

ಹುಬ್ಬಳ್ಳಿ ಮೂಲದ ಜ್ಯೋತಿ (22) ಕೊಲೆಯಾದ ಮಹಿಳೆ, ರಾಂಪುರ ಗ್ರಾಮದ ನಿವಾಸಿ ಜೀವನ್ (25) ಪತ್ನಿ ಕೊಲೆಗೈದ ಆರೋಪಿ. ಜೀವನ್‌, ಜ್ಯೋತಿ ಈ ಹಿಂದೆ ಗಾರ್ಮೆಂಟ್ಸ್‌ನಲ್ಲಿ ಪರಸ್ಪರ ಕೆಲಸ ಮಾಡುತ್ತಿದ್ದಾಗಲೇ ಪ್ರೀತಿಸಿ ಮದುವೆಯಾಗಿದ್ದರು.

ಶನಿವಾರ ಸಂಜೆಯು ಸಹ ಮಾಡ್ರನ್‌ ಡ್ರೆಸ್‌ ಹಾಕಿಕೊಂಡು ಜ್ಯೋತಿ ಹೊರಗೆ ಹೊರಟಿದ್ದಳು. ಆಗಲೂ ಜೀವನ್‌ ವಿರೋಧಿಸಿದ್ದ, ಕೊನೆಗೆ ಬೈಕ್‌ನಲ್ಲಿ ಡ್ರಾಪ್‌ ಕೊಡುವುದಾಗಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದ ಜೀವನ್‌ ಚಾಕುವಿನಿಂದ ಕುತ್ತಿಗೆ ಕೊಯ್ದು ಪತ್ನಿಯನ್ನ ಬರ್ಬರವಾಗಿ ಹತ್ಯೆಗೈದಿದ್ದಾನೆ. ಬಳಿಕ ಎಸ್ಕೇಪ್‌ ಆಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅರಸೀಕೆರೆ ತಾಲೂಕಿನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಾಸನದ ಜೀವನ್‌ ಹಾಗೂ ಧಾರವಾಡದ ಜ್ಯೋತಿ ಅವರು ಪ್ರೀತಿಸಿ ಮದುವೆಯಾಗಿದ್ದರು. ಒಂದು ವರ್ಷದ ಹಿಂದಷ್ಟೇ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ಜ್ಯೋತಿ ಅವರು ಮಾಡರ್ನ್‌ ಉಡುಪುಗಳನ್ನು ಧರಿಸುವುದು ಜೀವನ್‌ಗೆ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆಯೂ ಜಗಳಗಳು ನಡೆಯುತ್ತಿದ್ದವು. ಪತಿಯ ಆಕ್ಷೇಪದ ನಡುವೆಯೂ ಜ್ಯೋತಿ ಅವರು ತುಂಡುಡುಗೆ ಧರಿಸುತ್ತಿದ್ದರು. ಜೀವನ್‌ ಆಕ್ಷೇಪಕ್ಕೆ ಜ್ಯೋತಿ ಸೊಪ್ಪು ಹಾಕುತ್ತಿರಲಿಲ್ಲ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.