ಏರೋ ಇಂಡಿಯಾ 2023: ಮಾಂಸ ಮಾರಾಟ ನಿಷೇಧ ಸಂಬಂಧ ಬಿಬಿಎಂಪಿ ಸ್ಪಷ್ಟನೆ, ಹೋಟೆಲ್‌ಗಳಲ್ಲಿ ಮಾಂಸಹಾರ ಮಾರಾಟಕ್ಕೆ ಷರತ್ತು ಬದ್ಧ ಅನುಮತಿ
ಯಲಹಂಕ ವಾಯು ನೆಲೆಯಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ‘ಏರೋ ಇಂಡಿಯಾ–2023’ ಪ್ರದರ್ಶನದ ಅಂಗವಾಗಿ ಮಾಂಸ ಮಾರಾಟ, ಹೋಟೆಲ್‌ಗಳಲ್ಲಿ ಮಾಂಸದೂಟಕ್ಕೆ ನಿಷೇಧ ಸಂಬಂಧ ಬಿಬಿಎಂಪಿ ಸ್ಪಷ್ಟನೆ ನೀಡಿದೆ.

ಬೆಂಗಳೂರು: ಯಲಹಂಕ ವಾಯು ನೆಲೆಯಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ‘ಏರೋ ಇಂಡಿಯಾ–2023’ ಪ್ರದರ್ಶನದ ಅಂಗವಾಗಿ ಮಾಂಸ ಮಾರಾಟ, ಹೋಟೆಲ್‌ಗಳಲ್ಲಿ ಮಾಂಸದೂಟಕ್ಕೆ ನಿಷೇಧ ಸಂಬಂಧ ಬಿಬಿಎಂಪಿ ಸ್ಪಷ್ಟನೆ ನೀಡಿದೆ.
ಫೆಬ್ರವರಿ13ರಿಂದ 17ರವರೆಗೆ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಮಾಂಸ ಮಾರಾಟ, ಹೋಟೆಲ್‌ಗಳಲ್ಲಿ ಮಾಂಸದೂಟಕ್ಕೆ ಈ ಹಿಂದೆ ನಿಷೇಧ ಹೇರಲಾಗಿತ್ತು.
ಇದೀಗ ಈ ಕುರಿತು ಬಿಬಿಎಂಪಿ ಸ್ಪಷ್ಟನೆ ನೀಡಿದ್ದು, ಹೋಟೆಲ್‌ಗಳಲ್ಲಿ ಮಾಂಸಹಾರ ಮಾರಾಟ ಮಾಡಲು ಷರತ್ತುಬದ್ಧ ಅನುಮತಿ ನೀಡಿದೆ.
ವಿಮಾನಗಳಿಗೆ ಹಕ್ಕಿಗಳು ಪ್ರಮುಖ ಶತ್ರು. ಮಾಂಸ ಮಾರಾಟ, ಮಾಂಸ ತ್ಯಾಜ್ಯಗಳು ಇರುವಲ್ಲಿ ಹಕ್ಕಿಗಳ ಹಾರಾಟ ಹೆಚ್ಚಿರುತ್ತದೆ. ಇದರಿಂದ ವಿಮಾನಗಳಿಗೆ ಅಪಾಯವಾಗುತ್ತದೆ. ಹೀಗಾಗಿ, ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಆದರೆ, ಹೋಟೆಲ್‌ಗಳಲ್ಲಿ ಮಾಂಸದ ತ್ಯಾಜ್ಯಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡುವ ಷರತ್ತಿಗೆ ಒಳಪಟ್ಟು ಮಾಂಸಹಾರ ಮಾರಾಟಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ.
ಫೆ.13ರಿಂದ 17ರವರೆಗೆ ನಡೆಯಲಿರುವ ಪ್ರದರ್ಶನದ ಸಂದರ್ಭದಲ್ಲಿ ಹಕ್ಕಿಗಳ ಹಾರಾಟ ತಡೆಯುವ ಸಲುವಾಗಿ ವಿಂಗ್ ಕಮಾಂಡರ್ ಅವರ ಮನವಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಮಾಂಸಾಹಾರಿ ಹೋಟೆಲ್‌ಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಾರ್ವಜನಿಕವಾಗಿ ಬಿಸಾಡದೆ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ನಿಯಮ ಉಲ್ಲಂಘಿಸಿದರೆ ಬಿಬಿಎಂಪಿ ಕಾಯ್ದೆ ಮತ್ತು ಭಾರತೀಯ ಏರ್‌ಕ್ರಾಫ್ಟ್ ನಿಯಮಗಳ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


