ರಾಜ್ಯ

ಉಡುಪಿ: ಅಪ್ರಾಪ್ತ ಮಲಮಗಳ ಮೇಲೆ ಅತ್ಯಾಚಾರ ಎಸಗಿದ 49 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಅಪ್ರಾಪ್ತ ಮಲ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ 49 ವರ್ಷದ ವ್ಯಕ್ತಿಗೆ ಉಡುಪಿಯ ಪೊಕ್ಸೊ ಪ್ರಕರಣಗಳ ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಉಡುಪಿ: ಅಪ್ರಾಪ್ತ ಮಲಮಗಳ ಮೇಲೆ ಅತ್ಯಾಚಾರ ಎಸಗಿದ 49 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
ಪ್ರಾತಿನಿಧಿಕ ಚಿತ್ರ
Published On :

ಉಡುಪಿ: ಅಪ್ರಾಪ್ತ ಮಲ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ 49 ವರ್ಷದ ವ್ಯಕ್ತಿಗೆ ಉಡುಪಿಯ ಪೊಕ್ಸೊ ಪ್ರಕರಣಗಳ ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ವ್ಯಕ್ತಿಯನ್ನು ಗಣೇಶ್ ನಾಯಕ್ ಎಂದು ಗುರುತಿಸಲಾಗಿದೆ.

ಚಾರ್ಜ್ ಶೀಟ್ ಪ್ರಕಾರ, ನಾಯಕ್ ಸಂತ್ರಸ್ತೆಯ ತಾಯಿಯೊಂದಿಗೆ ಎರಡನೇ ಮದುವೆಯಾಗಿದ್ದರು ಮತ್ತು ನಂತರ ಅವರೊಂದಿಗೆ ವಾಸಿಸುತ್ತಿದ್ದರು. ಅವರ ಪತ್ನಿ ಕೆಲಸದ ನಿಮಿತ್ತ ಬೇರೆ ಊರಿಗೆ ಹೋಗಿದ್ದಾಗ, ನಾಯಕ್ 2021ರ ಅಕ್ಟೋಬರ್‌ನಲ್ಲಿ ಅಪ್ರಾಪ್ತ ಮಲಮಗಳಿಗೆ ಮದ್ಯ ಬೆರೆಸಿದ ಜ್ಯೂಸ್ ನೀಡಿ ಲೈಂಗಿಕ ಕಿರುಕುಳ ನೀಡಿದ್ದರು.

ಮೂರು ತಿಂಗಳ ನಂತರ ತಾಯಿ ಹಿಂದಿರುಗಿದಾಗ ಮಗಳು ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಸಂತ್ರಸ್ತೆ ತನಗಾದ ಸಂಕಟವನ್ನು ವಿವರಿಸಿದಾಗ 2022ರ ಜನವರಿಯಲ್ಲಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಆಗಿನ ಸರ್ಕಲ್ ಇನ್ಸ್‌ಪೆಕ್ಟರ್ ಕೆಆರ್ ಗೋಪಿಕೃಷ್ಣ ಅವರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ವೇಳೆ ಒಟ್ಟು 10 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಯಿತು.

ಜೀವಾವಧಿ ಶಿಕ್ಷೆಯ ಜೊತೆಗೆ, ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ಅಪರಾಧಿಗೆ 10,000 ರೂಪಾಯಿ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ ಅವರು ಹೆಚ್ಚುವರಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದಿದ್ದಾರೆ.

ಪ್ರಾಸಿಕ್ಯೂಷನ್ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ವೈಟಿ ರಾಘವೇಂದ್ರ ವಾದ ಮಂಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.