ಬೆಳಗಾವಿಯ ಎಲ್ಲಾ 18 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲು ಎನ್‌ಸಿಪಿ ಮುಂದು!
ಬೆಳಗಾವಿ ಜಿಲ್ಲೆಯ ಎಲ್ಲe 18 ವಿಧಾನಸಭಾ ಕ್ಷೇತ್ರಗಳಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ’ ಎಂದು ಎನ್‌ಸಿಪಿ ಪ್ರಧಾನ ಕಾರ್ಯದರ್ಶಿ ರಾಮಭಾವು ಜಾಧವ್ ಅವರು ಭಾನುವಾರ ಹೇಳಿದರು.

ಬೆಳಗಾವಿ: ‘ಬೆಳಗಾವಿ ಜಿಲ್ಲೆಯ ಎಲ್ಲಾ 18 ವಿಧಾನಸಭಾ ಕ್ಷೇತ್ರಗಳಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ’ ಎಂದು ಎನ್‌ಸಿಪಿ ಪ್ರಧಾನ ಕಾರ್ಯದರ್ಶಿ ರಾಮಭಾವು ಜಾಧವ್ ಅವರು ಭಾನುವಾರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರ ಸೂಚನೆಯಂತೆ ರಾಜ್ಯದ ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಗರಿಷ್ಠ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಮುಂಬರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಮತ್ತು ಲೋಕಸಭಾ ಚುನಾವಣೆಗೆ ಬೆಳಗಾವಿಯ ಎಲ್ಲಾ ಕ್ಷೇತ್ರಗಳಲ್ಲಿಯೂ ಪಕ್ಷದ ವತಿಯಿಂದ ಅಭ್ಯರ್ಥಿಗಳ ಕಣಕ್ಕಿಳಿಸಲು ಪಕ್ಷವು ನಿರ್ಧರಿಸಿದೆ. ಉತ್ತರ ಕರ್ನಾಟಕ ಭಾಗ ಸೇರಿದಂತೆ ಹಲವೆಡೆ ಪಕ್ಷವನ್ನು ಸಂಘಟಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
"ಇತರ ರಾಷ್ಟ್ರೀಯ ಪಕ್ಷಗಳಿಂದ ಹೊರಬಂದು ಎನ್‌ಸಿಪಿಯ ಭಾಗವಾಗಲು ಬಯಸುವ ನಾಯಕರು ಮತ್ತು ಪಕ್ಷದ ಕಾರ್ಯಕರ್ತರನ್ನು ನಾವು ಸ್ವಾಗತಿಸುತ್ತೇವೆ. ನಮ್ಮ ಪಕ್ಷಕ್ಕೆ ಸೇರಲು ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವ ನಾಯಕರನ್ನು ನಾವು ಯಾವಾಗಲೂ ಸ್ವಾಗತಿಸುತ್ತೇವೆಂದು ಹೇಳಿದರು. ಈ ವೇಳೆ ಜಿಲ್ಲಾ ಎನ್ ಸಿಪಿ ಅಧ್ಯಕ್ಷ ಅಮೋಲ್ ದೇಸಾಯಿ, ಮುಖಂಡ ದುರ್ಗೇಶ್ ಮೇತ್ರಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


