ಬೆಂಗಳೂರು: ಕ್ಯಾಂಟರ್ ಹರಿದು ಮಹಿಳೆ ದುರ್ಮರಣ
ಕಸ್ತೂರಬಾ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.

ಬೆಂಗಳೂರು: ಕಸ್ತೂರಬಾ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
ಭಾರತೀನಗರದ ನಿವಾಸಿ ಸುಧಾ (37) ಮೃತಪಟ್ಟ ಮಹಿಳೆಯಾಗಿದ್ದಾರೆ. ಮಗಳನ್ನು ಕಾಲೇಜಿಗೆ ಬಿಟ್ಟು ಮನೆಗೆ ಹಿಂತಿರುಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಸುಧಾ ಅವರು ಪ್ರತೀನಿತ್ಯ ತಮ್ಮ ಮಕ್ಕಳನ್ನು ಪಿಕ್ ಆ್ಯಂಡ್ ಡ್ರಾಪ್ ಮಾಡುತ್ತಿದ್ದರು. ಅಂತೆಯೇ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ದ್ವಿತೀಯ ಪಿಯುತಿ ಓದುತ್ತಿದ್ದ ಮಗಳನ್ನು ಡ್ರಾಪ್ ಮಾಡಿ ಬೆಳಿಗ್ಗೆ ಸುಧಾ ಮರಳುತ್ತಿದ್ದರು. ಈ ವೇಳೆ ಕಸ್ತೂರ ಬಾ ರಸ್ತೆಯಲ್ಲಿ ಅವರ ಸ್ಕೂಟರ್'ಗೆ ಹಿಂದಿನಿಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಇದರಿಂದ ಕೆಳಗೆ ಬಿದ್ದ ಅವರ ಮೇಲೆ ಕ್ಯಾಂಟರ್ ಚಕ್ರಗಳು ಹರಿದಿದೆ. ಪರಿಣಾಮ ಸುಧಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕ್ಯಾಂಟರ್ ಚಾಲಕ ಸೈಯದ್ ಅಲ್ಲಾ ಬಕ್ಷ್ (51) ಎಂಬಾತನನ್ನು ಬಂಧಿಸಿರುವ ಪೊಲೀಸರು, ಕ್ಯಾಂಟರ್ ಅನ್ನು ವಶಪಡಿಸಿಕೊಂಡಿದ್ದಾರೆ. ಘಟನೆ ಸಂಬಂಧ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


