ನಗರದಲ್ಲಿ ಅಕ್ರಮ ಬ್ಯಾನರ್ ಗಳ ಹಾವಳಿ: ಆದೇಶ ಧಿಕ್ಕರಿಸುತ್ತಿರುವ ರಾಜಕೀಯ ಮುಖಂಡರ ವಿರುದ್ಧ ಕ್ರಮಕ್ಕೆ ಬಿಬಿಎಂಪಿ ಮುಂದು!
ಹಲವು ಬಾರಿ ಎಚ್ಚರಿಕೆಗಳನ್ನು ನೀಡಿದ್ದರೂ ನಗರದಲ್ಲಿ ಅಕ್ರಮ ಬ್ಯಾನರ್ ಗಳ ಹಾವಳಿ ಮುಂದುವರೆದಿದ್ದು, ಹೈಕೋರ್ಟ್ ಆದೇಶ ಧಿಕ್ಕರಿಸುತ್ತಿರುವ ರಾಜಕೀಯ ಮುಖಂಡರು ಹಾಗೂ ಇತರರ ವಿರುದ್ಧ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದೆ.

ಬೆಂಗಳೂರು: ಹಲವು ಬಾರಿ ಎಚ್ಚರಿಕೆಗಳನ್ನು ನೀಡಿದ್ದರೂ ನಗರದಲ್ಲಿ ಅಕ್ರಮ ಬ್ಯಾನರ್ ಗಳ ಹಾವಳಿ ಮುಂದುವರೆದಿದ್ದು, ಹೈಕೋರ್ಟ್ ಆದೇಶ ಧಿಕ್ಕರಿಸುತ್ತಿರುವ ರಾಜಕೀಯ ಮುಖಂಡರು ಹಾಗೂ ಇತರರ ವಿರುದ್ಧ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದೆ.
ಹಳೆ ವಿಮಾನ ನಿಲ್ದಾಣದ ಮುಖ್ಯರಸ್ತೆಯಲ್ಲಿರುವ ದೊಮ್ಮಲೂರು ವಾರ್ಡ್‌ನಲ್ಲಿ ಬಿಜೆಪಿ ಮುಖಂಡರು ಶಾಂತಿನಗರ ಮಂಡಲ ಉಪಾಧ್ಯಕ್ಷ ಕೆ.ಸದಾ ರೆಡ್ಡಿ ಅವರಿಗೆ ಜನ್ಮದಿನದ ಶುಭಾಶಯ ಕೋರಿ ರಸ್ತೆಯ ಇಕ್ಕೆಲಗಳಲ್ಲಿ ದೊಡ್ಡ ದೊಡ್ಡ ಕಟೌಟ್‌ಗಳನ್ನು ಹಾಕಿರುವುದು ಕಂಡು ಬಂದಿದೆ.
ಈ ಹಿಂದೆ ಆದೇಶ ಹೊರಡಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ವಾರಾಂತ್ಯದ ವೇಳೆಗೆ ಕನಿಷ್ಟ 10 ಎಫ್ಐಆರ್ ದಾಖಲಿಸುವಂತೆ ಪ್ರತಿ ವಲಯದ ಸಹಾಯಕ ಆಯುಕ್ತರು ಮತ್ತು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೆ, ಈ ವರೆಗೂ ಯಾವುದೇ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿಲ್ಲ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ತುಷಾರ್ ಗಿರಿನಾಥ್ ಅವರು, ಕಾರ್ಯಪಾಲಕ ಎಂಜಿನಿಯರ್‌ಗಳು ಫ್ಲೆಕ್ಸ್'ಗಳನ್ನು ತೆಗೆಯುವ ಕಾರ್ಯ ಕೈಗೊಂಡಿದ್ದಾರೆಂದು ಹೇಳಿದ್ದಾರೆ.
ಇದೇ ವೇಳೆ ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಈ ನಡುವೆ ಬ್ಯಾನರ್ ಗಳ ತೆರವು ಮಾಡುವ ಕುರಿತು ಗಿರಿನಾಥ್ ಅವರು ನೀಡಿರುವ ಹೇಳಿಕೆಯನ್ನು ನಗರದ ತಜ್ಞ ಅಶ್ವಿನ್ ಮಹೇಶ್ ಅವರು ಖಂಡಿಸಿದ್ದಾರೆ. ಬ್ಯಾನರ್ ತೆರವು ಅಗತ್ಯ. ಆದರೆ, ಅದಷ್ಟೇ ಸಾಕಾಗುವುದಿಲ್ಲ, ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಂಡರೆ ಮಾತ್ರ ತಡೆ ಒಡ್ಡಿದಂತಾಗುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


