ಹಾದಿ-ಬೀದಿ ಜಗಳ: ಸ್ಥಳ ನಿಯೋಜನೆ ಮಾಡದೆ ಡಿ.ರೂಪಾ, ರೋಹಿಣಿ ಸಿಂಧೂರಿ ವರ್ಗಾವಣೆ; ಮೌನೀಶ್ ಮೌದ್ಗಿಲ್ ಸಹ ಎತ್ತಂಗಡಿ
ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕಿತ್ತಾಡಿಕೊಂಡು, ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ...

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕಿತ್ತಾಡಿಕೊಂಡು, ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ.
ಡಿ. ರೂಪಾ ಅವರ ಪತಿ, ಐಎಎಸ್ ಅಧಿಕಾರಿ ಮೌನೀಶ್ ಮೌದ್ಗಿಲ್ ಅವರನ್ನೂ ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಡಿಪಿಆರ್)ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ನಿನ್ನೆಯಷ್ಟೇ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದ ಸರ್ಕಾರ, ಇಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಾಗೂ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಡಿ. ರೂಪಾ ಅವರಿಗೆ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿದೆ.
ಮೌನೀಶ್ ಮೌದ್ಗಿಲ್ ಅವರ ವರ್ಗಾವಣೆಯಿಂದ ತೆರವಾದ ಸರ್ವೆ ಮತ್ತು ಲ್ಯಾಂಡ್ ರೆಕಾರ್ಡ್ ಇಲಾಖೆಯ ಆಯುಕ್ತರ ಹುದ್ದೆಗೆ ಅಲ್ಲಿಯೇ ಹೆಚ್ಚುವರಿ ನಿದೇಶಕರಾಗಿದ್ದ ಸಿ.ಎನ್.ಸುಧೀಂದ್ರ ಅವರನ್ನು ನೇಮಿಸಲಾಗಿದೆ.
ಧಾರ್ಮಿಕ ದತ್ತಿ ಇಲಾಖೆಯ ಆಯಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರ ಸ್ಥಾನಕ್ಕೆ ಬಸವರಾಜೇಂದ್ರ ಎಚ್ ಅವರನ್ನು ನೇಮಕ ಮಾಡಲಾಗಿದ್ದು, ಡಿ.ರೂಪಾ ಅವರ ಸ್ಥಾನಕ್ಕೆ ಭಾರತಿ.ಡಿ ಎಂಬುವವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


