ರಾಜ್ಯ

ಬೀದರ್‌: 7 ಅಂತಸ್ತಿನ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿ ಸಾವು

ಬೀದರ್ ಜಿಲ್ಲೆಯಲ್ಲಿ ಮಂಗಳವಾರ 22 ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಏಳು ಅಂತಸ್ತಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಶ್ರೀರಾಮ ಕ್ಯಾಡಗಿ ಎಂದು ಗುರುತಿಸಲಾಗಿದೆ.

ಬೀದರ್‌: 7 ಅಂತಸ್ತಿನ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿ ಸಾವು
ಸಾಂದರ್ಭಿಕ ಚಿತ್ರ
Published On :

ಬೀದರ್: ಬೀದರ್ ಜಿಲ್ಲೆಯಲ್ಲಿ ಮಂಗಳವಾರ 22 ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಏಳು ಅಂತಸ್ತಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಶ್ರೀರಾಮ ಕ್ಯಾಡಗಿ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಶ್ರೀರಾಮ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಬ್ರಿಮ್ಸ್) ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದನು. ಬ್ರಿಮ್ಸ್ ಹಾಸ್ಟೆಲ್‌ನಲ್ಲಿ ವಾಸವಿದ್ದ ಆತ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶ್ರೀರಾಮ ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನವನಾಗಿದ್ದು, ತಂದೆಯ ಮರಣದ ನಂತರ ಅವರು ಖಿನ್ನತೆಗೆ ಒಳಗಾಗಿದ್ದನು. ಶ್ರೀರಾಮ ಕಾಲೇಜಿನಲ್ಲಿ ಟಾಪರ್ ಆಗಿದ್ದ ಎನ್ನಲಾಗಿದೆ.

ಪ್ರಕರಣದ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ. ಹೊಸನಗರ ಪೊಲೀಸರು ಆತನ ಹಾಸ್ಟೆಲ್ ಮೇಟ್‌ಗಳು, ಸ್ನೇಹಿತರು ಮತ್ತು ಶಿಕ್ಷಕರ ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.