ಜನವರಿ 12ಕ್ಕೆ ಹುಬ್ಬಳ್ಳಿಗೆ ಪ್ರಧಾನಿ ಮೋದಿ ಆಗಮನ, ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಭಾಗಿ- ಸಿಎಂ ಬೊಮ್ಮಾಯಿ
ಪ್ರಧಾನಿ ನರೇಂದ್ರ ಮೋದಿ, ಇದೇ ತಿಂಗಳ 12 ರಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಇದೇ ತಿಂಗಳ 12 ರಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಂದು ಪ್ರಧಾನಿ ಮೋದಿಯವರು ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಲಿದ್ದಾರೆ. ಏಳು ದಿನ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳು ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಪಾಲ್ಗೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಜನವರಿ 19ಕ್ಕೆ ನಾರಾಯಣಪುರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ಕೇಂದ್ರ ಹಾಗೂ ರಾಜ್ಯ ಅನುದಾನಿತ ನಾರಾಯಣಪುರ ಎಡದಂಡೆ ಕಾಲುವೆ (ಎನ್ ಎಲ್ ಬಿ ಸಿ) ಆಧುನೀಕರಣದ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗುಲ್ಬರ್ಗಾದ ಬಂಜಾರ ಸಮಾವೇಶ ನಡೆಸುವ ಯೋಜನೆಯಿದ್ದು, ಪ್ರಧಾನಿ ಮೋದಿಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ನಿಶ್ಚಯವಾಗಿಲ್ಲ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


