ರಾಜ್ಯ

ಹಾಸನ: ಮೀನು ಹಿಡಿಯಲು ತೆರಳುತ್ತಿದ್ದವರ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ; ಸಂಘ ಪರಿವಾರದ ಕಾರ್ಯಕರ್ತ ಬಲಿ

ತಡರಾತ್ರಿ ಹೇಮಾವತಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದಾಗ ಅಪರಿಚಿತರು ಗುಂಡಿನ ದಾಳಿ ಮಾಡಿದ್ದರಿಂದ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ.

ಹಾಸನ: ಮೀನು ಹಿಡಿಯಲು ತೆರಳುತ್ತಿದ್ದವರ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ; ಸಂಘ ಪರಿವಾರದ ಕಾರ್ಯಕರ್ತ ಬಲಿ
ಸಾಂದರ್ಭಿಕ ಚಿತ್ರ
Published On :

ಹಾಸನ: ತಡರಾತ್ರಿ ಹೇಮಾವತಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದಾಗ ಅಪರಿಚಿತರು ಗುಂಡಿನ ದಾಳಿ ಮಾಡಿದ್ದರಿಂದ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ.

ಸೋಮವಾರ ಸಂಜೆ ಅಪರಿಚಿತರಿಂದ ನಡೆದ ಗುಂಡಿನ ದಾಳಿಯಲ್ಲಿ ಯುವಕ ನವೀನ್(39) ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಸನ‌ ಜಿಲ್ಲೆ ಸಕಲೇಶಪುರ  ತಾಲೂಕಿನ ತಂಬಲಗೇರಿ  ಗ್ರಾಮದ ಹೊರವಲಯದಲ್ಲಿ ಗುಂಡಿನ ದಾಳಿ ನಡೆದಿದೆ.

ನವೀನ್ ಸೇರಿದಂತೆ ನಾಲ್ವರು ಮೀನು ಹಿಡಿಯಲು ತೆರಳಿದ್ದ ವೇಳೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ನವೀನ್ ಜೊತೆಯಲ್ಲಿ ಅವರ ಗೆಳೆಯರಾದ ದಯಾನಂದ್​, ಪದ್ಮನಾಭ್, ರಾಜಾಚಾರಿ ಇದ್ದರು. ಈ ದಾಳಿಯಲ್ಲಿ ದಯಾನಂದ್ ಮತ್ತು ಪದ್ಮಾನಾಭ್​ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.