ರಾಜ್ಯ

ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿತ, ಮೃತರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 20 ಲಕ್ಷ, ಬಿಎಂಆರ್ ಸಿಎಲ್ ನಿಂದ 20 ಲಕ್ಷ ರೂ. ಪರಿಹಾರ

ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದ ಪರಿಣಾಮ ಮೃತಪಟ್ಟ ತಾಯಿ ಹಾಗೂ ಎರಡು ವರ್ಷದ ಮಗುವಿನ ಕುಟುಂಬಸ್ಥರಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿ ಹಾಗೂ ಬಿಎಂಆರ್ ಸಿಎಲ್ ನಿಂದ 20 ಲಕ್ಷ ರೂ. ಪರಿಹಾರವನ್ನು ಪ್ರಕಟಿಸಲಾಗಿದೆ.

ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿತ, ಮೃತರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 20 ಲಕ್ಷ, ಬಿಎಂಆರ್ ಸಿಎಲ್ ನಿಂದ 20 ಲಕ್ಷ ರೂ. ಪರಿಹಾರ
ಮೆಟ್ರೋ ಪಿಲ್ಲರ್ ಕುಸಿತದ ಸ್ಥಳ ಹಾಗೂ ದುರಂತಕ್ಕೆ ಸಿಲುಕಿದ ಕುಟುಂಬ
Published On :

ಬೆಂಗಳೂರು: ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದ ಪರಿಣಾಮ ಮೃತಪಟ್ಟ ತಾಯಿ ಹಾಗೂ ಎರಡು ವರ್ಷದ ಮಗುವಿನ ಕುಟುಂಬಸ್ಥರಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿ ಹಾಗೂ ಬಿಎಂಆರ್ ಸಿಎಲ್ ನಿಂದ  20 ಲಕ್ಷ ರೂ. ಪರಿಹಾರವನ್ನು ಪ್ರಕಟಿಸಲಾಗಿದೆ.

ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ವೇಳೆ ಪಿಲ್ಲರ್‌ಗೆ ನಿಲ್ಲಿಸಿದಂತಹ ಕಬ್ಬಿಣದ ರಾಡ್‌ಗಳು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮಗುವಿನ ಮೇಲೆ ಬಿದಿದ್ದವು. ಇದರಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6 ತಿಂಗಳು) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತಂದೆ ಹಾಗೂ ಮಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ. 

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜುಂ ಪರ್ವೇಜ್, ಇದೊಂದು ದುರಾದೃಷ್ಟಕರ ಘಟನೆಯಾಗಿದ್ದು, ಮೃತರ ಕುಟುಂಬಸ್ಥರಿಗೆ 20 ಲಕ್ಷ ಪರಿಹಾರ ಒದಗಿಸಲಾಗುವುದು ಎಂದರು.

ಮೆಟ್ರೋ ನಿರ್ಮಾಣದಲ್ಲಿ ಸಾಧ್ಯವಾದಷ್ಟು ಅತ್ಯಂತ ಹೆಚ್ಚಿನ ಗುಣಮಟ್ಟವನ್ನು ಅನುಸರಿಸುತ್ತಿದ್ದೇವೆ. ಘಟನೆ ಸಂಬಂಧ ವಿಸ್ತೃತವಾಗಿ ತನಿಖೆ ನಡೆಸಲಾಗುವುದು, ಒಂದು ವೇಳೆ ತಾಂತ್ರಿಕ ದೋಷ ಅಥವಾ ಕಾರ್ಮಿಕರ ತಪ್ಪಿನಿಂದಾದ ಅವಘಡ ಎಂದು ಕಂಡುಬಂದಲ್ಲಿ ಮುಂದೆ ಇಂತಹ ಘಟನೆ ಸಂಭವಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. 

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮೃತರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಹಾಗೂ ಘಟನೆ ಸಂಬಂಧ ಸಮಗ್ರವಾಗಿ ತನಿಖೆ ನಡೆಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.