ರಾಜ್ಯದ 30 ಲಕ್ಷ ಬೂಸ್ಟರ್ ಡೋಸ್ ಮನವಿಗೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆಯಿಲ್ಲ: ಅಧಿಕಾರಿಗಳು
ಕೋವಿಡ್ -19 ಲಸಿಕೆ ಡೋಸ್‌ಗಳ ವಿತರಣೆಯ ಪ್ರಮಾಣ ಮತ್ತು ಸಮಯದ ಕುರಿತು ಕೇಂದ್ರ ಸರ್ಕಾರದ ಪ್ರತಿಕ್ರಿಯೆಗಾಗಿ ಕರ್ನಾಟಕ ಆರೋಗ್ಯ ಇಲಾಖೆ ಕಾದು ಕುಳಿತಿದೆ.

ಬೆಂಗಳೂರು: ಕೋವಿಡ್ -19 ಲಸಿಕೆ ಡೋಸ್‌ಗಳ ವಿತರಣೆಯ ಪ್ರಮಾಣ ಮತ್ತು ಸಮಯದ ಕುರಿತು ಕೇಂದ್ರ ಸರ್ಕಾರದ ಪ್ರತಿಕ್ರಿಯೆಗಾಗಿ ಕರ್ನಾಟಕ ಆರೋಗ್ಯ ಇಲಾಖೆ ಕಾದು ಕುಳಿತಿದೆ.
ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಸಿಕೆಗೆ ಇದೀಗ ಬೇಡಿಕೆಗಳು ಹೆಚ್ಚಾಗತೊಡಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು 30 ಲಕ್ಷ ಬೂಸ್ಟರ್ ಡೋಸ್ ಲಸಿಕೆಗೆ ಕೇಂದ್ರಕ್ಕೆ ಮನವಿ ಮಾಡಿಕೊಂಡಿತ್ತು. ಆದರೆ, ಈ ಬಗ್ಗೆ ಕೇಂದ್ರ ಸರ್ಕಾರದಿಂದ ಇನ್ನೂ ಯಾವುದೇ ಪ್ರತಿಕ್ರಿಯೆಗಳು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯಕ್ಕೆ ಎಷ್ಟು ಲಸಿಕೆಗಳನ್ನು ತಲುಪಿಸಲಾಗುವುದು ಮತ್ತು ಯಾವ ಸಮಯದಲ್ಲಿ ಲಸಿಕೆಗಳು ರಾಜ್ಯಕ್ಕೆ ರವಾನಿಸಲಾಗುವುದು ಎಂಬುದರ ಬಗ್ಗೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆಗಳೂ ಬಂದಿಲ್ಲ ಎಂದು ರಾಜ್ಯ ಆರೋಗ್ಯ ಇಲಾಖೆಯ ಉಪ ನಿರ್ದೇಶಕಿ (ರೋಗನಿರೋಧಕ) ಡಾ ರಜನಿ ಅವರು ಹೇಳಿದ್ದಾರೆ.
ಚೀನಾ, ಯುಎಸ್‌ಎ, ಜಪಾನ್ ಮತ್ತು ದಕ್ಷಿಣ ಕೊರಿಯಾದಂತಹ ದೇಶಗಳಲ್ಲಿ ಕೋವಿಡ್ -19 ಪ್ರಕರಣಗಳ ಉಲ್ಬಣದೊಂದಿಗೆ, ಡಿಸೆಂಬರ್‌ನಲ್ಲಿ ಮತ್ತೊಂದು ನಿರೀಕ್ಷಿತ ಅಲೆಯ ವಿರುದ್ಧ ಸನ್ನದ್ಧತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವವು ಹಲವು ಕ್ರಮಗಳ ಕೈಗೊಳ್ಳುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


