ಫೆಬ್ರವರಿ 17ಕ್ಕೆ 2023-24ನೇ ಸಾಲಿನ ರಾಜ್ಯ ಬಜೆಟ್: ಸಿದ್ಧತೆ ಆರಂಭಿಸಿದ ಸಿಎಂ ಬೊಮ್ಮಾಯಿ
ಫೆಬ್ರವರಿ 17 ರಂದು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿದ್ಧತೆಗಳನ್ನು ಆರಂಭಿಸಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಫೆಬ್ರವರಿ 17 ರಂದು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿದ್ಧತೆಗಳನ್ನು ಆರಂಭಿಸಿದ್ದಾರೆಂದು ತಿಳಿದುಬಂದಿದೆ.
ಬಜೆಟ್ಗೆ ಸಿದ್ಧತೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಕಲಬುರ್ಗಿಗೆ ಭೇಟಿ ನೀಡಿದ ಮರುದಿನನೇ ಅಂದರೆ ಜನವರಿ 20 ರಿಂದ ಇಲಾಖಾ ಮುಖ್ಯಸ್ಥರು ಮತ್ತು ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಣಿ ಸಭೆ ನಡೆಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗಲೇ ರಾಜ್ಯ ಸರ್ಕಾರ ಬಜೆಟ್ ಮಂಡನೆ ಮಾಡಲು ಮುಂದಾಗಿದ್ದು, ಇದು ಪ್ರಸ್ತುತ ಸರ್ಕಾರ ಕೊನೆಯ ಬಜೆಟ್ ಆಗಿರಲಿದೆ. ಹೀಗಾಗಿ ಮತದಾರರನ್ನು ಓಲೈಸಲು ಮುಖ್ಯಮಂತ್ರಿಗಳು ಹಲವು ಹೊಸ ಯೋಜನೆಗಳನ್ನು ಘೋಷಿಸುವ ಸಾಧ್ಯತೆಯಿದೆ.
ಬೊಮ್ಮಾಯಿ ಅವರು ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ನೀರಾವರಿ ಯೋಜನೆಗಳತ್ತ ಹೆಚ್ಚಿನ ಗಮನ ಹರಿಸಲಿದ್ದಾರೆ, ಬೆಂಗಳೂರು ಮತ್ತು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಯೋಜನೆಗಳನ್ನು ಅವರು ಘೋಷಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, 2023-24ರ ಬಜೆಟ್ನ ಪ್ರಾಥಮಿಕ ಸುತ್ತಿನ ಸಭೆಗಳು ಈಗಾಗಲೇ ಮುಗಿದಿವೆ. ಫೆಬ್ರವರಿ 20 ರ ನಂತರ, ಮುಖ್ಯಮಂತ್ರಿ ಅವರು ಬೆಂಗಳೂರಿನಲ್ಲಿದ್ದಾಗಲೆಲ್ಲಾ ಪ್ರತಿದಿನ ಸಭೆಗಳನ್ನು ನಡೆಸುತ್ತಾರೆಂದು ಹೇಳಿದ್ದಾರೆ.
ಕೋವಿಡ್ ನಂತರದ, ಅಬಕಾರಿ ಇಲಾಖೆ ಸೇರಿದಂತೆ ತೆರಿಗೆ ಸಂಗ್ರಹಣೆಗಳು ಗಮನಾರ್ಹವಾಗಿ ಹೆಚ್ಚಾದ ಕಾರಣ, ಬೊಮ್ಮಾಯಿ ಅವರು ಈ ಬಾರಿ ಅನೇಕ ಹೊಸ ಯೋಜನೆಗಳನ್ನು ಘೋಷಿಸಲಿದ್ದು, ಈ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್ ಗಾತ್ರವು ದೊಡ್ಡದಾಗಿರಲಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


