'ಸ್ಯಾಂಟ್ರೋ ರವಿ' ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜ.17ಕ್ಕೆ ಮುಂದೂಡಿಕೆ
'ಸ್ಯಾಂಟ್ರೋ' ರವಿಯನ್ನು ಕೂಡಲೇ ಬಂಧಿಸಬೇಕು ಎಂಬ ಕೂಗು ಎಲ್ಲೆಡೆಯಿಂದ ಕೇಳಿಬರುತ್ತಿರುವ ಬೆನ್ನಲ್ಲೇ, ಮೈಸೂರಿನ 6ನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಸ್ಯಾಂಟ್ರೋ ರವಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಜನವರಿ 17ಕ್ಕೆ ಮುಂದೂಡಿದೆ.

ಮೈಸೂರು: 'ಸ್ಯಾಂಟ್ರೋ' ರವಿಯನ್ನು ಕೂಡಲೇ ಬಂಧಿಸಬೇಕು ಎಂಬ ಕೂಗು ಎಲ್ಲೆಡೆಯಿಂದ ಕೇಳಿಬರುತ್ತಿರುವ ಬೆನ್ನಲ್ಲೇ, ಮೈಸೂರಿನ 6ನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಸ್ಯಾಂಟ್ರೋ ರವಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಜನವರಿ 17ಕ್ಕೆ ಮುಂದೂಡಿದೆ.
ಅರ್ಜಿ ವಿಚಾರಣೆ ಗುರುವಾರ ನಡೆಯಿತು. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ವಕೀಲರು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ವಿಚಾರಣೆ ಮಂಗಳವಾರಕ್ಕೆ ಮುಂದೂಡಲಾಗಿದೆ.
ಬಿಜೆಪಿ ಸಚಿವರು ಮತ್ತು ಮುಖಂಡರೊಂದಿಗೆ ನಂಟು ಹೊಂದಿರುವ ಆರೋಪ ಹಾಗೂ ಅತ್ಯಾಚಾರ ಪ್ರಕರಣವನ್ನು ಸ್ಯಾಂಟ್ರೋ ರವಿ ಎದುರಿಸುತ್ತಿದ್ದು, ಕಳ್ಳಸಾಗಣೆ ದಂಧೆಯ ಕಿಂಗ್‌ಪಿನ್ ಎಂದೂ ಕೂಡ ಹೇಳಲಾಗಿದೆ.
ಸ್ಯಾಂಟ್ರೊ ರವಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ಸರ್ಕಾರದ ಕೆಲವು ಸಚಿವರೊಂದಿಗೆ ಸಂಪರ್ಕ ಹೊಂದಿ ಹಲವರು ಅಕ್ರಮ ಚಟುವಟಕೆಯಲ್ಲಿ ಭಾಗಿಯಾಗಿರುವ ಸುದ್ದಿ ವ್ಯಾಪಕವಾಗಿ ಹರಡಿರುವ ಹಿನ್ನೆಲಯಲ್ಲಿ ಆತಂಕಕ್ಕೆ ಒಳಗಾಗಿರುವ ಆರೋಪಿ ಸ್ಯಾಂಟ್ರೊ ರವಿ ಜಿಲ್ಲಾ ನ್ಯಾಯಾಲಯಕ್ಕೆ ಆಗಮಿಸಿ ಶರಣಾಗಲಿದ್ದಾನೆ ಎಂಬ ವದಂತಿ ಕೇಳಿ ಬಂದಿತ್ತು. ಆ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಪತ್ರಕರ್ತರು ನ್ಯಾಯಾಲಯದ ಆವರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರು.
ಏತನ್ಮಧ್ಯೆ, ರಾಮನಗರ ಬಳಿ ಪೊಲೀಸರು ಆತನ ಚಾಲಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರವಿ ನಾಪತ್ತೆಯಾದ ದಿನದಿಂದ ತಲೆಮರೆಸಿಕೊಂಡಿದ್ದ ಚಾಲಕನನ್ನು ವಿಶೇಷ ತಂಡ ಬಂಧಿಸಿದೆ. ರಾಮನಗರದ ರೆಸಾರ್ಟ್‌ನಲ್ಲಿ ಆತನನ್ನು ಬಂಧನಕ್ಕೊಳಪಡಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


