ಗೋವಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದರ ಬಗ್ಗೆ ಕರ್ನಾಟಕಕ್ಕೇನೂ ಚಿಂತೆಯಿಲ್ಲ: ಸಿಎಂ ಬೊಮ್ಮಾಯಿ
ಮಹದಾಯಿ ವಿವಾದ ಸಂಬಂಧ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದರ ಬಗ್ಗೆ ಕರ್ನಾಟಕಕ್ಕೇನೂ ಚಿಂತೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ.

ಶಿರಸಿ (ಉತ್ತರ ಕನ್ನಡ): ಮಹದಾಯಿ ವಿವಾದ ಸಂಬಂಧ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದರ ಬಗ್ಗೆ ಕರ್ನಾಟಕಕ್ಕೇನೂ ಚಿಂತೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ.
ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಬೊಮ್ಮಾಯಿಯವರು ಭಾನುವಾರ ಶಿರಸಿಗೆ ಭೇಟಿ ನೀಡಿದ್ದರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಿರಸಿಗೆ ಬೊಮ್ಮಾಯಿಯವರು ಭೇಟಿ ನೀಡಿದ್ದರು.
ರಾಜ್ಯ ಸರ್ಕಾರದ ಅವಧಿ ಪೂರ್ಣಗೊಳ್ಳಲು ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಗೆ ಅದರಲ್ಲೂ ವಿಶೇಷವಾಗಿ ಶಿರಸಿಗೆ ಪರಿಸರ ವಿಶ್ವವಿದ್ಯಾಲಯ ಸ್ಥಾಪನೆ ಸೇರಿದಂತೆ ಬೃಹತ್ ಕೊಡುಗೆಯನ್ನು ಘೋಷಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನದಿ ನೀರು ತಿರುವು ಯೋಜನೆಗೆ ಸಂಬಂಧಿಸಿದಂತೆ ಗೋವಾ ಸುಪ್ರೀಂ ಕೋರ್ಟ್‌ನ ಬಾಗಿಲು ತಟ್ಟಿದರೂ ನಮಗೇನೂ ಚಿಂತೆಯಿಲ್ಲ. “ಗೋವಾ ತನಗೆ ಬೇಕಾದ ಸ್ಥಳಕ್ಕೆ ಹೋಗಲಿ, ನಾವು ಚಿಂತಿಸಬೇಕಾಗಿಲ್ಲ. ಸುಪ್ರೀಂಕೋರ್ಟ್ ನಾಮನಿರ್ದೇಶನಗೊಂಡ ಪೀಠದ ನಿರ್ದೇಶನದಂತೆ ನಾವು ಕೆಲಸ ಮಾಡುತ್ತಿದ್ದೇವೆ. ಕಳಸಾ ಬಂಡೂರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ಪೀಠದ ನಿರ್ದೇಶನದಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಗೋವಾ ಈಗಾಗಲೇ ಸುಪ್ರೀಂ ಕೋರ್ಟ್‌ಗೆ ಹೋಗಿದ್ದು, ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಸುಪ್ರೀಂಕೋರ್ಟ್ ನೇಮಿಸಿದ ಪೀಠದ ನಿರ್ದೇಶನದಂತೆ ನಾವು ಅಧಿಸೂಚನೆಯನ್ನು ಹೊರಡಿಸಿದ್ದೇವೆಂದು ತಿಳಿಸಿದ್ದಾರೆ.
ಇದೇ ವೇಳೆ ಶಿರಸಿಗೆ ರೂ 250 ಕೋಟಿ ಪ್ಯಾಕೇಜ್ ಮತ್ತು ಪೂರ್ಣ ಪ್ರಮಾಣದ ಪರಿಸರ ವಿಶ್ವವಿದ್ಯಾಲಯದ ಸ್ಥಾಪನೆ ಸೇರಿದಂತೆ ಹಲವಾರು ಯೋಜನೆಗಳನ್ನು ಘೋಷಿಸಿದರು, ಇದಕ್ಕಾಗಿ ಈ ವರ್ಷ ಬಜೆಟ್ ಹಂಚಿಕೆಗಳನ್ನು ಮಾಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ಮಹದಾಯಿ ಜಲ ವಿವಾದ: ತನ್ನ ಪರವಾದ ತೀರ್ಪಿಗೆ ಗೋವಾ ಕೊನೆಯ ಪ್ರಯತ್ನ, ಕೇಂದ್ರ ಗೃಹ ಸಚಿವರ ಮುಂದೆ ನಿಯೋಗ ಒಯ್ಯಲಿರುವ ಸಿಎಂ
"ಈ ವಿಶ್ವವಿದ್ಯಾನಿಲಯವು ಈಗಾಗಲೇ ಅರಣ್ಯ ಮತ್ತು ತೋಟಗಾರಿಕೆ ಕಾಲೇಜುಗಳು ಅಸ್ತಿತ್ವದಲ್ಲಿರುವ ಶಿರಸಿಯಲ್ಲಿ ಮತ್ತಷ್ಟು ಅಭಿವೃದ್ಧಿಯನ್ನು ತರಲಿದೆ. ಕೃಷಿ, ಜೀವವೈವಿಧ್ಯ ಹಾಗೂ ವನ್ಯಜೀವಿ ಸಂರಕ್ಷಣೆ ಕುರಿತು ಅಧ್ಯಯನ ನಡೆಸಬೇಕಿದೆ. ಈ ವಿಶ್ವವಿದ್ಯಾನಿಲಯವು ಜನರ ಮೇಲೆ ಪರಿಸರ ಪರಿಣಾಮ ಮತ್ತು ವನ್ಯಜೀವಿಗಳ ರಕ್ಷಣೆಯ ಅಧ್ಯಯನವನ್ನು ಉತ್ತೇಜಿಸುತ್ತದೆ ಎಂದರು.
ಬಹು ನಿರೀಕ್ಷಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಮಾತನಾಡಿ, ಕುಮಟಾದಲ್ಲಿ ಆಸ್ಪತ್ರೆ ಬರಲಿದ್ದು, ಶೀಘ್ರವೇ ಶಂಕುಸ್ಥಾಪನೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಪಕ್ಷದ ಹೈಕಮಾಂಡ್ ಸೂಚನೆಯಂತೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದೂ ಇದೇ ವೇಳೆ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


