ಕೌಟುಂಬಿಕ ಕಲಹ: ವಿಜಯಪುರದಲ್ಲಿ ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
ಕೌಟುಂಬಿಕ ಕಲಹ ಹಿನ್ನೆಲೆ ಮೂವರು ಮಕ್ಕಳ ಜೊತೆಗೆ ನೀರಿನ ಸಂಪಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ವಿಜಯಪುರ: ಕೌಟುಂಬಿಕ ಕಲಹ ಹಿನ್ನೆಲೆ ಮೂವರು ಮಕ್ಕಳ ಜೊತೆಗೆ ನೀರಿನ ಸಂಪಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ತಾಯಿ ಗೀತಾ ತನ್ನ ಮೂವರು ಮಕ್ಕಳೊಂದಿಗೆ ಮಧ್ಯರಾತ್ರಿ ವೇಳೆ ಮನೆಯ ಎದುರು ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ರಾತ್ರಿ ಗೀತಾ ಮತ್ತು ಆಕೆಯ ಪತಿ ರಾಮು ಮಧ್ಯೆ ತೀವ್ರ ಜಗಳವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ತೀವ್ರ ನೊಂದಿದ್ದ ಗೀತಾ ಮಧ್ಯರಾತ್ರಿ ವೇಳೆ ಮಕ್ಕಳನ್ನು ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಿಜಯಪುರ ತಿಕೋಟಾ ತಾಲ್ಲೂಕಿನ ವಿಠಲವಾಡಿ ತಾಂಡಾದಲ್ಲಿ ಈ ದುರ್ಘಟನೆ ನಡೆದಿದೆ. ಮೃತರನ್ನು ತಾಯಿ ಗೀತಾ ರಾಮು ಚೌವ್ಹಾಣ್ (32), ಮಕ್ಕಳಾದ ಸೃಷ್ಟಿ (6), ಕಿಶನ್ (3), ಸಮರ್ಥ (4) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ತಿಕೋಟಾ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


