ರಾಜ್ಯ

ಬ್ರ್ಯಾಂಡ್ ಬೆಂಗಳೂರು: ಅಭಿಪ್ರಾಯ, ಸಲಹೆ ನೀಡುವ ಅವಧಿ ಜುಲೈ 15 ರವರೆಗೆ ವಿಸ್ತರಣೆ

ರಾಜ್ಯ ರಾಜಧಾನಿ ಬೆಂಗಳೂರು ನಗರ ಸಮಗ್ರ ಅಭಿವೃದ್ಧಿಗಾಗಿ ನಾಗರಿಕರಿಂದ ಅಭಿಪ್ರಾಯ, ಅನಿಸಿಕೆ, ಸಲಹೆಗಳನ್ನು ನೀಡುವ ಅವಧಿಯನ್ನು ಜೂನ್ 30 ರಿಂದ ಜುಲೈ 15 ರವರೆಗೆ ವಿಸ್ತರಿಸಲಾಗಿದೆ.

ಬ್ರ್ಯಾಂಡ್ ಬೆಂಗಳೂರು: ಅಭಿಪ್ರಾಯ, ಸಲಹೆ ನೀಡುವ ಅವಧಿ ಜುಲೈ 15 ರವರೆಗೆ ವಿಸ್ತರಣೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರ ಸಮಗ್ರ ಅಭಿವೃದ್ಧಿಗಾಗಿ ನಾಗರಿಕರಿಂದ ಅಭಿಪ್ರಾಯ, ಅನಿಸಿಕೆ, ಸಲಹೆಗಳನ್ನು ನೀಡುವ ಅವಧಿಯನ್ನು ಜೂನ್ 30 ರಿಂದ ಜುಲೈ 15 ರವರೆಗೆ ವಿಸ್ತರಿಸಲಾಗಿದೆ.

ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ನಗರ ಸಮಗ್ರ ಅಭಿವೃದ್ಧಿ ಹಾಗೂ ಬ್ರ್ಯಾಂಡ್ ಬೆಂಗಳೂರು ಮಾಡುವ ಉದ್ದೇಶದಿಂದ ಈಗಾಗಲೇ ಸರ್ವಪಕ್ಷ ಶಾಸಕರ ಜೊತೆ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರ ಜೊತೆ ಸಭೆ ನಡೆಸಿ ಅಭಿಪ್ರಾಯ- ಸಲಹೆಗಳನ್ನು ಪಡೆದಿದ್ದರು.

ಬೆಂಗಳೂರಿನ ನಾಗರಿಕರು ಹಾಗೂ ಬೇರೆ ರಾಜ್ಯ, ದೇಶ ಮತ್ತು ವಿದೇಶದಲ್ಲಿರುವಂತಹ ಎಲ್ಲ ವರ್ಗದ ನಾಗರಿಕರು ಬೆಂಗಳೂರಿನ ಅಭಿವೃದ್ಧಿಗಾಗಿ ಏಳು ವಿಚಾರಗಳಾದ ಸಂಚಾರಯುಕ್ತ ಬೆಂಗಳೂರು, ಹಸಿರು ಬೆಂಗಳೂರು, ಸ್ವಚ್ಛ ಬೆಂಗಳೂರು, ಜನಹಿತ ಬೆಂಗಳೂರು, ಆರೋಗ್ಯಕರ ಬೆಂಗಳೂರು, ಟೆಕ್ ಬೆಂಗಳೂರು ಹಾಗೂ ಜಲಸುರಕ್ಷಾ ಬೆಂಗಳೂರು ಕುರಿತು ತಮ್ಮ ಅಭಿಪ್ರಾಯ, ಅನಿಸಿಕೆ ಮತ್ತು ಸಲಹೆಗಳನ್ನು ನೀಡುವ ಸಲುವಾಗಿ ಜೂನ್ 21 ರಂದು ಪ್ರತ್ಯೇಕ ವೆಬ್ ಪೋರ್ಟಲ್ www.brandbengaluru.karnataka.gov.in ಬಿಡುಗಡೆಗೊಳಿಸಲಾಗಿತ್ತು.

ಇದರಲ್ಲಿ ಜೂನ್ 30ರವರೆಗೆ ಅಭಿಪ್ರಾಯ ಅನಿಸಿಕೆ ಹಾಗೂ ಸಲಹೆಗಳನ್ನು ನೀಡುವಂತೆ ನಾಗರಿಕರಲ್ಲಿ ಕೋರಲಾಗಿತ್ತು. ಅದರಂತೆ, ನಾಗರಿಕರಿಂದ ನಿರೀಕ್ಷೆಗೂ ಮೀರಿ ಅನಿಸಿಕೆ ಹಾಗೂ ಸಲಹೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸಮಗ್ರ ಅಭಿವೃದ್ಧಿಗೆ ನಾಗರಿಕರು ನೀಡುವ ಅಭಿಪ್ರಾಯ, ಸಲಹೆಗಳ ಸಮೀಕ್ಷೆಯ ಅವಧಿಯನ್ನು ಜೂ. 30 ರಿಂದ ಜುಲೈ 15 ರವರೆಗೆ ವಿಸ್ತರಿಸಲಾಗಿದೆ.

ಎಲ್ಲಾ ನಾಗರಿಕರು ಈ ಸದಾವಕಾಶವನ್ನು ಉಪಯೋಗಿಸಿಕೊಂಡು 'ಬ್ರ್ಯಾಂಡ್ ಬೆಂಗಳೂರು, ಬೆಟರ್ ಬೆಂಗಳೂರು ' ಸಮೀಕ್ಷೆಯಲ್ಲಿ ಪಾಲ್ಗೊಂಡು ಇನ್ನೂ ಹೆಚ್ಚು-ಹೆಚ್ಚು ಸಲಹೆಗಳನ್ನು ನೀಡುವ ಮೂಲಕ ಬೆಂಗಳೂರು ನಗರ ಸಮಗ್ರ ಅಭಿವೃದ್ಧಿಗೆ ಕೈ-ಜೋಡಿಸಲು ವಿನಂತಿ ಮಾಡಿಕೊಳ್ಳಲಾಗಿದೆ.

ನಾಗರಿಕರು ವೆಬ್ ಪೋರ್ಟಲ್ www.brandbengaluru.karnataka.gov.in ಮೂಲಕ ಮಾತ್ರವಲ್ಲದೇ ವಾಟ್ಸ್​ಆ್ಯಪ್​ ಸಂಖ್ಯೆ: 9480685700 ಮೂಲಕವೂ ಅಭಿಪ್ರಾಯ- ಅನಿಸಿಕೆ ಮತ್ತು ಸಲಹೆಗಳನ್ನು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ: 1533 ಗೆ ಕರೆಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.