ಬಿಲ್ ಬಾಕಿ ಉಳಿಸಿಕೊಂಡಿದ್ದರೂ ಗೃಹಜ್ಯೋತಿ ಪ್ರಯೋಜನ ಪಡೆಯಬಹುದು: ಬೆಸ್ಕಾಂ
ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಬಹುದಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು: ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಬಹುದಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಸೆಪ್ಟೆಂಬರ್ 30ರೊಳಗೆ ವಿದ್ಯುತ್ ಬಾಕಿ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಜುಲೈ 25ರೊಳಗೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಆಗಸ್ಟ್ ಬಿಲ್ನಲ್ಲಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ ಎಂದು ಹೇಳಿದೆ.
ಜುಲೈ 25ರಿಂದ ಆಗಸ್ಟ್ 25ರೊಳಗೆ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಸೆಪ್ಟೆಂಬರ್ ಬಿಲ್ನಲ್ಲಿ ಯೋಜನೆಯ ಪ್ರಯೋಜನ ದೊರೆಯಲಿದೆ. ಯೋಜನೆಗೆ ಅರ್ಹರಾಗಲು ಸರಾಸರಿ 200 ಯೂನಿಟ್ ಮೀರಬಾರದು ಎಂದು ತಿಳಿಸಿದೆ.
ಗೃಹ ಜ್ಯೋತಿ ಯೋಜನೆಗೆ ಗ್ರಾಹಕರು ಜುಲೈ 25 ರ ನಂತರ ಅರ್ಜಿ ಸಲ್ಲಿಸಿದರೆ ಅವರಿಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್ನಲ್ಲಿ ಪ್ರಯೋಜನ ಸಿಗುವುದಿಲ್ಲ. ಆದರೆ, ಯೋಜನೆಯ ಪ್ರಯೋಜನವನ್ನು ಅವರು, ಸೆಪ್ಟೆಂಬರ್ ತಿಂಗಳಲ್ಲಿ ಪಡೆಯಲಿದ್ದಾರೆ. ಯೋಜನೆಯ ನೋಂದಣಿಗೆ ವಿಳಂಬ ಬೇಡ. ಇಂದೇ ನೋಂದಾಯಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


