ಗದಗದಲ್ಲಿ 9 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ಅಧಿಕಾರಿಗಳ ವಿರುದ್ಧ ಆಕ್ರೋಶ
ಒಂಬತ್ತು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ಮಾಡಿರುವ ಘಟನೆ ಕರ್ನಾಟಕದ ಗದಗ ಜಿಲ್ಲೆಯ ಗಜೇಂದ್ರಗಡ ನಗರದಲ್ಲಿ ಶನಿವಾರ ನಡೆದಿದೆ.

ಗದಗ: ಒಂಬತ್ತು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ಮಾಡಿರುವ ಘಟನೆ ಕರ್ನಾಟಕದ ಗದಗ ಜಿಲ್ಲೆಯ ಗಜೇಂದ್ರಗಡ ನಗರದಲ್ಲಿ ಶನಿವಾರ ನಡೆದಿದೆ.
ನಗರದಲ್ಲಿ ಬೀದಿ ನಾಯಿಗಳು ದಾಳಿ ಹೆಚುತ್ತಿದ್ದು, ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ಆದಿತ್ಯ ಹನುಮಂತಪ್ಪ ಪವಾರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಘಟನೆಯಲ್ಲಿ ಗಾಯಗೊಂಡಿರುವ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ಪಟ್ಟಣದ ಹಿರೇ ಬಜಾರ್ ರಸ್ತೆಯಲ್ಲಿ ಬಾಲಕ ಏಕಾಂಗಿಯಾಗಿ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಮಧ್ಯಾಹ್ನ ಊಟಕ್ಕೆ ಮನೆಗೆ ಬಂದು ಶಾಲೆಗೆ ಹೋಗುತ್ತಿದ್ದ ಬಾಲಕನ ಮೇಲೆ ನಾಯಿಗಳು ದಾಳಿ ನಡೆಸಿವೆ.
ನಾಯಿಗಳ ಹಠಾತ್ ದಾಳಿಯನ್ನು ತಕ್ಷಣ ಗಮನಿಸಿದ ದಾರಿಹೋಕರು ಬಾಲಕನನ್ನು ರಕ್ಷಿಸಿದ್ದಾರೆ.
ಬಾಲಕರು ಮತ್ತು ವೃದ್ಧರು ಸೇರಿದಂತೆ ಜನರ ಮೇಲೆ ನಾಯಿಗಳ ಹಿಂಡು ದಾಳಿ ನಡೆಸುತ್ತಿದ್ದು, ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


