ಮಂಗಳೂರು: ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ, 13 ಗಂಟೆ ವಿಳಂಬ
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ(ಎಂಐಎ) ಸೋಮವಾರ ಟೇಕಾಫ್ ಆಗಬೇಕಿದ್ದ ಮಂಗಳೂರು - ದುಬೈ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ತಾಂತ್ರಿಕ ದೋಷದಿಂದ ಮಂಗಳವಾರ ಮಧ್ಯಾಹ್ನ ಕೊನೆಗೂ...

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ(ಎಂಐಎ) ಸೋಮವಾರ ಟೇಕಾಫ್ ಆಗಬೇಕಿದ್ದ ಮಂಗಳೂರು - ದುಬೈ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ತಾಂತ್ರಿಕ ದೋಷದಿಂದ ಮಂಗಳವಾರ ಮಧ್ಯಾಹ್ನ ಕೊನೆಗೂ ಟೇಕಾಫ್ ಆಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ಸೋಮವಾರ ಸಂಜೆ ವಿಮಾನ ದುಬೈಗೆ ಟೇಕ್ ಆಫ್ ಆಗಬೇಕಿತ್ತು. ಆದರೆ ತಾಂತ್ರಿಕ ಕಾರಣದಿಂದ ವಿಮಾನ ಟೇಕಾಫ್ ಆಗಲಿಲ್ಲ. ಹೀಗಾಗಿ ವಿಮಾನದಲ್ಲಿದ್ದ ಒಟ್ಟು 161 ಪ್ರಯಾಣಿಕರು ಇಡೀ ರಾತ್ರಿ ವಿಮಾನ ನಿಲ್ದಾಣದಲ್ಲಿಯೇ ಉಳಿದುಕೊಂಡಿದ್ದು, ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು.
ತಿರುವನಂತಪುರಂನಿಂದ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಲಾಗಿತ್ತು. ಅದು ಅಂತಿಮವಾಗಿ ಇಂದು ಮಧ್ಯಾಹ್ನ 12.20ಕ್ಕೆ ಟೇಕಾಫ್ ಆಗಿದೆ.
ಏರ್ ಇಂಡಿಯಾ ವಿಮಾನ ಅತಿ ಹೆಚ್ಚು ವಿಳಂಬವಾದ ಕಾರಣ ಪ್ರಯಾಣಿಕರಲ್ಲಿ ಏಳು ಜನ ಇತರ ವಿಮಾನಗಳಲ್ಲಿ ಹೊರಟರು ಎಂದು ಮೂಲಗಳು ತಿಳಿಸಿವೆ.
ವಿಮಾನ 13 ಗಂಟೆ ವಿಳಂಬವಾಗಿದ್ದಕ್ಕೆ ಆಕ್ರೋಶಗೊಂಡ ಪ್ರಯಾಣಿಕರು ವಿಮಾನ ನಿಲ್ದಾಣದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


