ಜೈನ ಮುನಿ ಹತ್ಯೆ ಹಿಂದೆ ಇಸಿಸ್ ಕೈವಾಡವಿರುವಂತಿದೆ: ಬಿಜೆಪಿ ಎಂಎಲ್ಸಿ ನಾರಾಯಣಸ್ವಾಮಿ
ಜೈನ ಮುನಿ ಹತ್ಯೆ ಮಾಡಿ 9 ತುಂಡು ಮಾಡಿರುವುದನ್ನು ನೋಡಿದರೆ ಇದಕ್ಕೆ ಇಸಿಸ್ ನಂಟಿದೆಯಾ ಎನ್ನುವ ಅನುಮಾನ ಬರುತ್ತಿದೆ ಎಂದು ಬಿಜೆಪಿ ಎಂಎಲ್ಸಿ ನಾರಾಯಣಸ್ವಾಮಿ ಅವರು ಮಂಗಳವಾರ ಹೇಳಿದರು.

ಬೆಂಗಳೂರು: ಜೈನ ಮುನಿ ಹತ್ಯೆ ಮಾಡಿ 9 ತುಂಡು ಮಾಡಿರುವುದನ್ನು ನೋಡಿದರೆ ಇದಕ್ಕೆ ಇಸಿಸ್ ನಂಟಿದೆಯಾ ಎನ್ನುವ ಅನುಮಾನ ಬರುತ್ತಿದೆ ಎಂದು ಬಿಜೆಪಿ ಎಂಎಲ್ಸಿ ನಾರಾಯಣಸ್ವಾಮಿ ಅವರು ಮಂಗಳವಾರ ಹೇಳಿದರು.
ವಿಧಾನ ಪರಿಷತ್ ನಲ್ಲಿ ನಿಯಮ 68ರ ಅಡಿ ನಡೆದ ಚರ್ಚೆ ವೇಳೆ ಮಾತನಾಡಿರುವ ಅವರು, ನಾವು ಇಸಿಸ್ ಭಯೋತ್ಪಾದಕರು ಯಾವ ರೀತಿ ಟಾರ್ಜರ್ ಕೊಡುತ್ತಾರೆ ಎಂದು ಕೇಳಿದ್ದೆವು. ಇಲ್ಲಿ ಜೈನ ಮುನಿ ಹತ್ಯೆ ಮಾಡಿ 9 ತುಂಡು ಮಾಡಿರುವುದನ್ನು ನೋಡಿದರೆ ಇದಕ್ಕೆ ಇಸಿಸ್ ನಂಟಿದೆಯಾ ಎಂಬ ಅನುಮಾನ ಬರುತ್ತಿದೆ ಎಂದು ಹೇಳಿದರು.
ಇಸಿಸ್ ಕೇರಳಕ್ಕೆ ಬಂದಿದೆ. ಕರ್ನಾಟಕ್ಕೂ ಬರಲಿದೆ. ಇದು ಇಸಿಸ್ ಮಾದರಿಯ ಹತ್ಯೆಯಾಗಿದೆ. ಹಾಗಾಗಿ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.
ಬಳಿಕ ಮಾತನಾಡಿದ ತೇಜಸ್ವಿನಿಗೌಡ ಅವರು, ಕುಕ್ಕರ್ ಬಾಂಬ್, ಶಿವಮೊಗ್ಗ ಘಟನೆ ನಾವು ಲಘುವಾಗಿ ಪರಿಗಣಿಸಿದೆವು. ಆದರೆ, ಎನ್ಐಎ ತನಿಖೆ ನಂತರವೇ ಇದರ ಆಳ ಅಗಲು ಗೊತ್ತಾಯಿತು. ಹಾಗಾಗಿ ಈ ಪ್ರಕರಣವನ್ನೂ ಲಘುವಾಗಿ ಪರಿಗಣಿಸಬಾರದು. ಸರ್ಕಾರದ ಉತ್ತರ ತುಂಬಾ ಜಾಳವಾಗಿದೆ, 6 ಲಕ್ಷ ಹಣಕ್ಕೆ ಮುನಿಯ ಹತ್ಯೆ ಯಾರೂ ನಂಬಲು ಸಾಧ್ಯವಿಲ್ಲ. ಹಾಗಾಗಿ ಸಿಬಿಐಗೆ ಕೊಡಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ನಿಯೋಗದಿಂದ ಇಂದು ರಾಜ್ಯಪಾಲರ ಭೇಟಿ
ಈ ನಡುವೆ ಬಿಜೆಪಿ ನಿಯೋಗವು ಬುಧವಾರ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಕೋರಿ ಮನವಿ ಪತ್ರ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


