ತುಮಕೂರು: ಮಗಳನ್ನು ಕತ್ತು ಹಿಸುಕಿ ಕೊಂದ ಮಹಿಳೆ ಬಂಧನ
ಮಹಿಳೆಯೊಬ್ಬಳು ತನ್ನ ಆರು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ಶಾಂತಿನಗರದಲ್ಲಿ ನಡೆದಿದೆ.

ತುಮಕೂರು: ಮಹಿಳೆಯೊಬ್ಬಳು ತನ್ನ ಆರು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ಶಾಂತಿನಗರದಲ್ಲಿ ನಡೆದಿದೆ.
ಹೇಮಲತಾ ಎಂಬ ಆರೋಪಿಯು ಶುಕ್ರವಾರ ತನ್ನ ಮಗಳು ತನ್ವಿತಾಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಳು. ಬಾಲಕಿಯ ಕಿರುಚಾಟ ಕೇಳಿ ಅಕ್ಕಪಕ್ಕದವರು ಮನೆಗೆ ಬಂದು ಹೇಮಲತಾಳಿಂದ ಮಗುವನ್ನು ಕಿತ್ತುಕೊಂಡಿದ್ದಾರೆ. ಆದರೆ ತನ್ವಿತಾ ಸಾವನ್ನಪ್ಪಿದ್ದಳು.
ಮಾಹಿತಿ ಪಡೆದ ಪೊಲೀಸರು ಹೇಮಲತಾ ಅವರನ್ನು ಬಂಧಿಸಿದ್ದಾರೆ. ಹೇಮಲತಾ ಮಾನಸಿಕ ಅಸ್ವಸ್ಥಳಾಗಿದ್ದಳು ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ಮಾನಸಿಕ ಅಸ್ವಸ್ಥೆಯನ್ನು ಮಗುವಿನೊಂದಿಗೆ ಏಕಾಂಗಿಯಾಗಿರಲು ಬಿಡಲಾಗಿತ್ತೆ ಎಂದು ಪೊಲೀಸರು ಪ್ರಶ್ನಿಸಿದ್ದಾರೆ. ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


