ಧಾರಾಕಾರ ಮಳೆಯ ಪರಿಣಾಮ ಕೊಡಗಿನಲ್ಲಿ ಜನಜೀವನ ಅಸ್ತವ್ಯಸ್ತ
ಕೊಡಗು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಮುಂದುವರೆದಿದೆ. ಜಿಲೆಯಾದ್ಯಂತ ಭೂಕುಸಿತ, ವಿದ್ಯುತ್ ಲೈನ್ ಗಳಿಗೆ ಹಾನಿ, ಪ್ರವಾಹ ವರದಿಯಾಗಿದೆ.

ಕೊಡಗು: ಕೊಡಗು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಮುಂದುವರೆದಿದೆ. ಜಿಲೆಯಾದ್ಯಂತ ಭೂಕುಸಿತ, ವಿದ್ಯುತ್ ಲೈನ್ ಗಳಿಗೆ ಹಾನಿ, ಪ್ರವಾಹ ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಭೂ ಕುಸಿತ ಉಂಟಾಗಿ 2 ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು.
ಮೊಣ್ಣಿಗೇರಿ ಬಳಿ ಇರುವ ಎನ್ ಹೆಚ್ 275 ರಲ್ಲಿ ಭೂ ಕುಸಿತದ ಪರಿಣಾಮ ಮರ ಉರುಳಿಬಿದ್ದಿದ್ದು, ಮಂಗಳೂರು-ಮಡಿಕೇರಿ ರಸ್ತೆಯಲ್ಲಿ ಕೆಲವು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪೊಲೀಸರು ಅಗ್ನಿಶಾಮಕದಳದ ಸಿಬ್ಬಂದಿಗಳು ಮರ ತೆರವಿಗೆ ಕ್ಷಿಪ್ರಗತಿಯ ಕ್ರಮ ಕೈಗೊಂಡರು. ಕಾವೇರಿ ನದಿ ನೀರಿನ ಹರಿವು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಭಾಗಮಂಡಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಜಲಾವೃತಗೊಂಡಿದೆ.
ಭಾಗಮಂಡಲಕ್ಕೆ ಭೇಟಿ ನೀಡುವ ಪ್ರವಾಸಿಗರು ಪ್ರವಾಹದ ಪರಿಣಾಮ ಸಿಲುಕಿದ್ದರು. ಇನ್ನು ಕುಶಾಲನಗರದಾದ್ಯಂತ ಹಲವಾರು ತಗ್ಗು ಪ್ರದೇಶಗಳು ಜಲಾವೃತಗೊಳ್ಳುವ ಆತಂಕ ಇದ್ದು, ಹಾರಂಗಿ ಜಲಾಶಯದ ಹೊರಹರಿವು ಕಡಿಮೆಯಾಗಿದೆ. ಭಾನುವಾರ ಹಾರಂಗಿ ಜಲಾಶಯದ ಕ್ರೆಸ್ಟ್ ಗೇಟ್‌ಗಳನ್ನು ತೆರೆಯಲಾಗಿದ್ದು, 25 ಸಾವಿರ ಕ್ಯೂಸೆಕ್‌ಗೂ ಅಧಿಕ ನೀರನ್ನು ಹೊರಕ್ಕೆ ಬಿಡಲಾಗಿದೆ. ಕುಶಾಲನಗರದಲ್ಲಿನ ತಗ್ಗು ಪ್ರದೇಶಗಳಲ್ಲಿರುವವರಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳಲು ಸೂಚಿಸಲಾಗಿತ್ತು.

ತಗ್ಗು ಪ್ರದೇಶಗಳು ಜಲಾವೃತಗೊಳ್ಳುವ ಆತಂಕ ಇರುವ ಹಿನ್ನೆಲೆಯಲ್ಲಿ ಹೊರಹರಿವನ್ನು 8000 ಕ್ಯುಸೆಕ್ಸ್ ಗಳಿಗೆ ಇಳಿಸಿ ಬಳಿಕ ಸಂಜೆ 7 ಗಂಟೆ ವೇಳೆಗೆ 30,000 ಕ್ಯುಸೆಕ್ಸ್ ಗಳಿಗೆ ಏರಿಕೆ ಮಾಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


