ರಾಜ್ಯ

ಹಾಸನದಲ್ಲಿ ಕಾರು ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ: ಲೋಕೋಪಯೋಗಿ ಇಲಾಖೆ ಎಇಇ ಅಧಿಕಾರಿ ಸಾವು!

ಕ್ಯಾಂಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಲೋಕೋಪಯೋಗಿ ಇಲಾಖೆ ಎಇಇ ಸಾವನ್ನಪ್ಪಿದ್ದಾರೆ.

ಹಾಸನದಲ್ಲಿ ಕಾರು ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ: ಲೋಕೋಪಯೋಗಿ ಇಲಾಖೆ ಎಇಇ ಅಧಿಕಾರಿ ಸಾವು!
ಸಂಗ್ರಹ ಚಿತ್ರ
Published On :

ಹಾಸನ: ಕ್ಯಾಂಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಲೋಕೋಪಯೋಗಿ ಇಲಾಖೆ ಎಇಇ ಸಾವನ್ನಪ್ಪಿದ್ದಾರೆ. 

ಚನ್ನರಾಯಪಟ್ಟಣ ತಾಲೂಕಿನ ಉದಯಪುರ ಬಳಿ ಅಪಘಾತ ಸಂಭವಿಸಿದ್ದು ಮೃತನನ್ನು 58 ವರ್ಷದ ಮೋಹನ್‌ ಕುಮಾರ್ ಎಂದು ಗುರುತಿಸಲಾಗಿದೆ.

ಮೋಹನ್ ಕುಮಾರ್ ಸಕಲೇಶಪುರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಅಪಘಾತದಲ್ಲಿ ಗಾಯಗೊಂಡಿದ್ದ ಅವರನ್ನು ಹಾಸನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. 

ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.