ಬಿಜೆಪಿಯ ಸುಳ್ಳಿಗೆ ನೀವು ದಾಳವಾಗಬೇಡಿ: ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು!
ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳು ಕಳೆಯುವಷ್ಟರಲ್ಲಿಯೇ ಆಂತರಿಕ ಭಿನ್ನಮತ ಸ್ಫೋಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಸಿಎಲ್ ಪಿ ಸಭೆ ನಡೆಸಿ ಶಾಸಕರನ್ನು ತರಾಟೆ ತೆಗೆದುಗೊಂಡರು.

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳು ಕಳೆಯುವಷ್ಟರಲ್ಲಿಯೇ ಆಂತರಿಕ ಭಿನ್ನಮತ ಸ್ಫೋಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಸಿಎಲ್ ಪಿ ಸಭೆ ನಡೆಸಿ ಶಾಸಕರನ್ನು ತರಾಟೆ ತೆಗೆದುಗೊಂಡರು.
ಕೆಲ ಕಾಂಗ್ರೆಸ್ ಹಿರಿಯ ಶಾಸಕರಿಗೆ ಸಚಿವರು ಬೆಲೆ ಕೊಡುತ್ತಿಲ್ಲ. ವರ್ಗಾವಣೆಗಳು ಮಾಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲವನ್ನು ಸೃಷ್ಟಿಸಿತ್ತು. ಹೀಗಾಗಿ ಇಂದು ನಡೆದ ಸಿಎಲ್ ಪಿ ಸಭೆಯಲ್ಲಿ ಎಲ್ಲವನ್ನೂ ಆಲಿಸಿದ ಸಿಎಂ ಸಿದ್ದರಾಮಯ್ಯ ಬಿಜೆಪಿಯ ಸುಳ್ಳಿಗೆ ನೀವು ದಾಳವಾಗಬೇಡಿ ಎಂದು ಶಾಸಕರಿಗೆ ಕಿವಿಮಾತು ಹೇಳಿದ್ದಾರೆ.
ಹಿರಿಯ ಶಾಸಕರಿಗೆ ಸಚಿವರು ಬೆಲೆ ಕೊಡುತ್ತಿಲ್ಲ ಎಂಬ ಅಸಮಾದಾನದ ಪತ್ರದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಇನ್ನು ಬಹಿರಂಗ ಪತ್ರ ಬರೆದಿರುವುದಕ್ಕೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.
ಸಭೆಯಲ್ಲಿ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಅವರು, ಏನೇ ಅಸಮಾಧಾನ ಇದ್ದರೂ ನನ್ನ ಬಳಿ ಖುದ್ದು ಚರ್ಚಿಸುವಂತೆ ಸೂಚಿಸಿದ್ದಾರೆ. ಎಷ್ಟು ಒತ್ತಡಗಳಿದ್ದರೂ ತಿಂಗಳಿಗೊಮ್ಮೆ ಶಾಸಕರ ಸಭೆ ಕರೆಯುತ್ತೇನೆ ಎಂದೂ ಭರವಸೆ ನೀಡಿದ್ದಾರೆ.
ಇನ್ನು ಕೆಲ ಶಾಸಕರು ಇಂತಹವರನ್ನು ನಂಬಿ ರಾಜಕೀಯ ಮಾಡಿದರೆ ಪ್ರಯೋಜವಿಲ್ಲ ಎಂದು ಸಭೆಯಿಂದ ಹೊರಹೋದರು. ಇನ್ನು ಕೆಲ ಶಾಸಕರು ಇವರನ್ನು ನಂಬಿ ಏನನ್ನು ಮಾಡುವುದಕ್ಕೆ ಆಗುವುದಿಲ್ಲ, ಎಲ್ಲಾ ವ್ಯರ್ಥ ಎಂದು ಕೆಲ ಮಂದಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


