ಸಿದ್ದರಾಮಯ್ಯ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಟ್ವೀಟ್; ಬಿಜೆಪಿ ಕಾರ್ಯಕರ್ತೆ ಬಂಧನ, ಜಾಮೀನಿನ ಮೇಲೆ ಬಿಡುಗಡೆ
ಉಡುಪಿ ಕಾಲೇಜು ವಾಶ್ ರೂಂನಲ್ಲಿ ವಿಡಿಯೋ ರೆಕಾರ್ಡ್ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದ ತುಮಕೂರು ಮೂಲದ ಬಿಜೆಪಿ ಕಾರ್ಯಕರ್ತೆಯನ್ನು ಶುಕ್ರವಾರ ಬಂಧಿಸಲಾಗಿದ್ದು, ಕೆಲವೇ ಗಂಟೆಗಳ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ತುಮಕೂರು: ಉಡುಪಿ ಕಾಲೇಜು ವಾಶ್ ರೂಂನಲ್ಲಿ ವಿಡಿಯೋ ರೆಕಾರ್ಡ್ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದ ತುಮಕೂರು ಮೂಲದ ಬಿಜೆಪಿ ಕಾರ್ಯಕರ್ತೆಯನ್ನು ಶುಕ್ರವಾರ ಬಂಧಿಸಲಾಗಿದ್ದು, ಕೆಲವೇ ಗಂಟೆಗಳ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಶಕುಂತಲಾ ಎಚ್ಎಸ್ ಎಂಬುವವರು ಉಡುಪಿ ಘಟನೆಯ ಬಗ್ಗೆ ಕಾಂಗ್ರೆಸ್ ಪಕ್ಷದ ನಿಲುವನ್ನು ಟೀಕಿಸುವ ಭರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಬಗ್ಗೆ ನಿಂದನೀಯವಾಗಿ ಟ್ವೀಟ್ ಮಾಡಿದ್ದರು. ಕರ್ನಾಟಕ ಕಾಂಗ್ರೆಸ್ನ ಅಧಿಕೃತ ಹ್ಯಾಂಡಲ್ನ ಟ್ವೀಟ್ಗೆ ಪ್ರತಿಕ್ರಿಯೆಯಾಗಿ ಅವರು ಟ್ವೀಟ್ ಮಾಡಿದ್ದರು.
ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ನವರ ಪ್ರಕಾರ ಮಕ್ಕಳಾಟವಂತೆ..@siddaramaiah ನವರ ಸೊಸೆ or ಹೆಂಡ್ತಿ ಅವ್ರ ವಿಡಿಯೋವನ್ನು ಇದೆ ತರ ಮಾಡಿದ್ರೆ
— ಶಕುಂತಲ
ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ? pic.twitter.com/jP0QTKvL5R
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


