ರಾಜ್ಯ

ಭ್ರಷ್ಟಾಚಾರದಲ್ಲಿ ಭಾಗಿ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡ ಕಂದಾಯ ಇಲಾಖೆ!

ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕೆಲವೊಂದು ಕ್ರಮಗಳನ್ನು ಕೈಗೊಳ್ಳಲು ಸಚಿವ ಕೃಷ್ಣ ಬೈರೇಗೌಡ ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.

ಭ್ರಷ್ಟಾಚಾರದಲ್ಲಿ ಭಾಗಿ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡ ಕಂದಾಯ ಇಲಾಖೆ!
ಸಚಿವ ಕೃಷ್ಣ ಬೈರೇಗೌಡ
Published On :

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕೆಲವೊಂದು ಕ್ರಮಗಳನ್ನು ಕೈಗೊಳ್ಳಲು ಸಚಿವ ಕೃಷ್ಣ ಬೈರೇಗೌಡ ಮುಂದಾಗಿದ್ದು, ಇದರ ಬೆನ್ನಲ್ಲೇ ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದಾರೆ.

ಇದರಂತೆ ಇಲಾಖೆಯ ಅಧಿಕಾರಿಗಳು, ನೌಕರರ ವಿರುದ್ಧದ ಸುಮಾರು 67 ಶಿಸ್ತುಕ್ರಮ ಕಡತಗಳು ವಿಚಾರಣೆಯಾಗದೆ ಅಥವಾ ವಿಚಾರಣೆ ಆಗಿಯೂ ಇತ್ಯರ್ಥವಾಗದೇ ಕಳೆದ 5ರಿಂದ 7 ವರ್ಷಗಳ ಕಾಲ ಸಚಿವಾಲಯದಲ್ಲೇ ಬಾಕಿ ಇದ್ದವು. ಪ್ರಸ್ತುತ ಆ ಎಲ್ಲಾ ಕಡತಗಳನ್ನೂ ವಿಲೇವಾರಿ ಮಾಡಲಾಗಿದೆ.

ಪ್ರಸ್ತುತ 67 ಪ್ರಕರಣಗಳ ಪೈಕಿ ತಹಶೀಲ್ದಾರ್​ 30, ಗ್ರಾಮ ಆಡಳಿತ ಅಧಿಕಾರಿ 12, ಉಪ ನೋಂದಣಿ ಅಧಿಕಾರಿಗಳು 14, ಶಿರಸ್ತೇದಾರ್ 04, ರಾಜಸ್ವ ನಿರೀಕ್ಷಕರು 01, ಪ್ರಥಮ ದರ್ಜೆ ಸಹಾಕರು 02, ದ್ವಿತೀಯ ದರ್ಜೆ ಸಹಾಯಕರು 1, ಕೇಂದ್ರ ಸ್ಥಾನಿಕ ಸಹಾಯಕರು 01, ಜಿಲ್ಲಾ ನೋಂದಾಣಾಧಿಕಾರಿ 01 ಪ್ರಕರಣಗಳು ಒಳಗೊಂಡಿವೆ.

ಈ ಪ್ರಕರಣಗಳ ಪೈಕಿ ತಪ್ಪಿತಸ್ಥರು ಎಂದು ಸಾಬೀತಾಗಿರುವ 2 ಅಧಿಕಾರಿ/ನೌಕರರಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ ಜಾರಿಗೊಳಿಸಲಾಗಿದೆ.

ಲೋಕಾಯುಕ್ತ ತನಿಖಾ ವರದಿ ಶಿಫಾರಸಿನಂತೆ 18 ಪ್ರಕರಣಗಳಲ್ಲಿ ನೌಕರರ ಮೇಲಿನ ಆರೋಪಗಳು ಸಾಬೀತಾಗದ ಕಾರಣ, ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ.

ಒಂಬತ್ತು ಮಂದಿ ಅಧಿಕಾರಿಗಳಿಗೆ 1ರಿಂದ 4ರ ವರೆಗೆ ವಾರ್ಷಿಕ ವೇತನ, ಬಡ್ತಿಗಳನ್ನು ಕಡಿತಗೊಳಿಸುವ ಶಿಕ್ಷೆ ನೀಡಲಾಗಿದೆ. ಶಿಸ್ತುಕ್ರಮ ಜರುಗಿಸುವ ಮುನ್ನವೇ ನಿವೃತ್ತಿಗೊಂಡಿರುವ 13 ಮಂದಿ ಅಧಿಕಾರಿ/ನೌಕರರಿಗೆ ನಿವೃತ್ತಿ ವೇತನದಲ್ಲಿ ಶೇ.10ರಿಂದ ಶೇ.50ರ ವರೆಗೆ ನಿವೃತ್ತಿ ವೇತನ ಕಡಿತಗೊಳಿಸುವ ಶಿಕ್ಷೆ ನೀಡಲಾಗಿದೆ. ಇನ್ನಿತರ ಅಧಿಕಾರಿ/ನೌಕರರಿಗೆ ಸಿಸಿಎ ನಿಯಮ 1957-8(8) ರಲ್ಲಿ ವಿವರಿಸಿರುವ ಇನ್ನಿತರ ದಂಡನೆಗಳನ್ನು ವಿಧಿಸಲಾಗಿರುತ್ತದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಭ್ರಷ್ಟಾಚಾರ ರಹಿತ ಆಡಳಿತ ನೀಡಲು ಕಾಂಗ್ರೆಸ್ ಸರಕಾರ ಸಂಪೂರ್ಣ ಬದ್ಧವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.