ರಾಜ್ಯ

ಚಾಮರಾಜನಗರದಲ್ಲಿ ಲಘು ವಿಮಾನ ಪತನ, ಹೊತ್ತಿ ಉರಿದ ಜೆಟ್

ಚಾಮರಾಜನಗರ ತಾಲೂಕಿನ ಎಚ್ ಮೂಕಳ್ಳಿ ಬಳಿ ಗುರುವಾರ ಲಘು ವಿಮಾನ ಪತನವಾಗಿದ್ದು, ಇಬ್ಬರು ಪೈಲಟ್​ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾಮರಾಜನಗರದಲ್ಲಿ ಲಘು ವಿಮಾನ ಪತನ, ಹೊತ್ತಿ ಉರಿದ ಜೆಟ್
ಲಘು ವಿಮಾನ ಪತನ
Published On :

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಎಚ್ ಮೂಕಳ್ಳಿ ಬಳಿ ಗುರುವಾರ ತರಬೇತಿ ನಿರತ ಲಘು ವಿಮಾನವೊಂದು ಪತನವಾಗಿದ್ದು, ಇಬ್ಬರು ಪೈಲಟ್​ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜೆಟ್ ವಿಮಾನ ಪತನಗೊಂಡು, ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್​ಗಳು ಪ್ಯಾರಾಚೂಟ್ ಬಳಸಿ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. 
ಈ ಲಘು ವಿಮಾನ ಪತನಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.