ರಾಜ್ಯ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆಶಿಗೆ ಬಿಗ್ ರಿಲೀಫ್, ಮಧ್ಯಂತರ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆಶಿಗೆ ಬಿಗ್ ರಿಲೀಫ್, ಮಧ್ಯಂತರ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್
ಡಿಕೆ.ಶಿವಕುಮಾರ್
Published On :

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ.

ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನ ಹೈಕೋರ್ಟ್ ಏಕಸದಸ್ಯ ಪೀಠ ಮತ್ತೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್​ ವಿರುದ್ಧದ ಸಿಬಿಐ ತನಿಖೆಗೆ ಎರಡನೇ ಬಾರಿಗೆ ಹೈಕೋರ್ಟ್ ಮೇ ಅಂತ್ಯದವರೆಗೂ ತಡೆಯಾಜ್ಞೆ ನೀಡಿತ್ತು. ಇದೀಗ ಮತ್ತೆ ತಡೆಯಾಜ್ಞೆ ವಿಸ್ತರಿಸಿದ್ದು, ಈ ಮೂಲಕ ಡಿಕೆ ಶಿವಕುಮಾರ್​ ಅವರಿಗೆ ನಿರಾಳ ಸಿಕ್ಕಂತಾಗಿದೆ.

ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(2), 13(1)ಇ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಈ ಪ್ರಕರಣ ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಇದೀಗ ತಡೆಯಾಜ್ಞೆ ಮತ್ತೆ ಮುಂದುವರೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.