ಕೆಂಪಣ್ಣ ನೇತೃತ್ವದ ಗುತ್ತಿಗೆದಾರರ ಸಂಘದ ನಿಯೋಗದಿಂದ ಸಿಎಂ ಭೇಟಿ: ಬಾಕಿ ಇರುವ 22 ಸಾವಿರ ಕೋಟಿ ರೂ. ಬಿಡುಗಡೆಗೆ ಮನವಿ
ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನೇತೃತ್ವದ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಬಾಕಿ ಇರುವ 22 ಸಾವಿರ ಕೋಟಿ ರೂ.ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡರು.

ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನೇತೃತ್ವದ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಬಾಕಿ ಇರುವ 22 ಸಾವಿರ ಕೋಟಿ ರೂ.ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡರು.
“ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆ, ನಿಗಮ ಮತ್ತು ಮಂಡಳಿಗಳ ಕಾಮಗಾರಿಗಳನ್ನು ತಡೆಹಿಡಿಯುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಪೂರ್ಣಗೊಂಡಿರುವ ಕಾಮಗಾರಿಗಳ ಬಾಕಿ ಮೊತ್ತವನ್ನು ಬಿಡುಗಡೆ ಮಾಡದಂತೆಯೂ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಇದರಿಂದ ಗುತ್ತಿಗೆದಾರರಿಗೆ ತೀವ್ರ ತೊಂದರೆಯಾಗುವುದರ ಜೊತೆಗೆ ಆರ್ಥಿಕ ನಷ್ಟವನ್ನು ಅನುಭವಿಸಬೇಕಾಗುತ್ತದೆ” ಎಂದು ಸಂಘವು ಹೇಳಿದೆ.
“ಕಾಮಗಾರಿಗಳನ್ನು ನಿಲ್ಲಿಸಿದರೆ ಗುಣಮಟ್ಟ ಕಾಪಾಡಿಕೊಳ್ಳಲು ಅಸಾಧ್ಯವಾಗುತ್ತದೆ. ಅಲ್ಲದೇ, ರಾಜ್ಯದ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ಧಕ್ಕೆ ಉಂಟಾಗುತ್ತದೆ. ಕಾನೂನುಬದ್ಧವಾಗಿ ನಡೆಯುತ್ತಿರುವ ಕಾಮಗಾರಿಗಳನ್ನು ಮುಂದುವರಿಸಲು ಮತ್ತು ಪೂರ್ಣಗೊಂಡಿರುವ ಕಾಮಗಾರಿಗಳ ಮೊತ್ತವನ್ನು ಬಿಡುಗಡೆ ಮಾಡಲು ಯಾವುದೇ ತಡೆಯೊಡ್ಡಬಾರದು” ಎಂದು ಮನವಿ ಮಾಡಿದೆ.
“ಸರ್ಕಾರ ಹೊರಡಿಸಿರುವ ಕಾಮಗಾರಿ ತಡೆಯ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು. ಸಂಬಂಧಪಟ್ಟ ಎಲ್ಲ ಇಲಾಖೆಗಳಿಗೂ ಸೂಚನೆ ನೀಡಬೇಕು” ಎಂದು ನಿಯೋಗ ಮನವಿ ಮಾಡಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


