ಒಡಿಶಾ ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ
ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆಯನ್ನು ಮೇಲ್ವಿಚಾರಣೆ ಮಾಡಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಜಿಸಿದ್ದಾರೆ.

ಬೆಂಗಳೂರು: ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆಯನ್ನು ಮೇಲ್ವಿಚಾರಣೆ ಮಾಡಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಜಿಸಿದ್ದಾರೆ.
ಘಟನೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಸಿದ್ದರಾಮಯ್ಯ ಅವರು, ವರದಿ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವು ಒದಗಿಸಲು ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಂತೋಷ್ ಲಾಡ್ ಅವರ ಜೊತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸೇರಿ ಇತರೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


