ರಾಜ್ಯ

ರಾಜಕಾರಣಿಗಳ ಲಾಬಿಗೆ ಸೊಪ್ಪು ಹಾಕದ ಸರ್ಕಾರ: ಬಿಡಿಎ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ನೇಮಕ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಐಎಎಸ್​ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜಕಾರಣಿಗಳ ಲಾಬಿಗೆ ಸೊಪ್ಪು ಹಾಕದ ಸರ್ಕಾರ: ಬಿಡಿಎ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ನೇಮಕ
ರಾಕೇಶ್ ಸಿಂಗ್
Published On :

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಐಎಎಸ್​ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿಡಿಎ ಅಧ್ಯಕ್ಷ ಸ್ಥಾನಕ್ಕೆ  ರಾಜಕಾರಣಿಗಳ ಪೈಪೋಟಿ ಹಿನ್ನೆಲೆಯಲ್ಲಿ ಐಎಎಸ್​ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಶಾಸಕರಾದ ಟಿ.ಬಿ.ಜಯಚಂದ್ರ, ಎನ್.ಎ ಹ್ಯಾರಿಸ್, ಎಂ.ಕೃಷ್ಣಪ್ಪ, ಪ್ರಿಯಾಕೃಷ್ಣ ಸೇರಿದಂತೆ ಹಲವರು ತೀವ್ರ ಲಾಬಿ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಸರ್ಕಾರ ರಾಜಕಾರಣಿಗಳಿಗೆ ಮಣೆಹಾಕದೆ ಬಿಡಿಎ ಅಧ್ಯಕ್ಷ ಹುದ್ದೆಗೆ IAS ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​​ನ ಕೆಲ ಶಾಸಕರಿಗೆ ಭಾರೀ ನಿರಾಸೆಯಾಗಿದೆ.

ಬಿಡಿಎ ಸೇರಿದಂತೆ ರಾಮನಗರ ಹಾಗೂ ಗ್ರಾಮಾಂತರ ಮತ್ತು ಕರ್ನಾಟಕದ ಒಟ್ಟು 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರಾಗಿ ರಾಖೇಶ್ ಸಿಂಗ್ ಅವರನ್ನು ನೇಮಕ ಮಾಡಿದ್ದು, ಇದು ಅಚ್ಚರಿಕೆ ಕಾರಣವಾಗಿದೆ.

ಸಹಜವಾಗಿ ಬಿಡಿಎ ಹಾಗೂ ಇತರೆ ಯೋಜನಾ ಪ್ರಾಧಿಕಾರ ಅಧ್ಯಕ್ಷರ ಹುದ್ದೆಗೆ ಆಡಳಿತ ಪಕ್ಷದ ನಾಯಕರನ್ನು ನೇಮಕ ಮಾಡುವುದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಆದ್ರೆ, ಇದೀಗ ಅಚ್ಚರಿ ಎಂಬಂತೆ ಸರ್ಕಾರ ಪಕ್ಷದ ನಾಯಕರನ್ನು ಬಿಟ್ಟು ಐಎಎಸ್​ ಅಧಿಕಾರಿಯನ್ನು ನೇಮಕ ಮಾಡಿ ಅಚ್ಚರಿ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.