ಮುಂದುವರಿದ ವರ್ಗಾವಣೆ ಪರ್ವ: ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ಆಗಿ ರವಿ ಚನ್ನಣ್ಣನವರ್ ನೇಮಕ
ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು ಗುರುವಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು ಗುರುವಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.
ಕಳೆದ ವರ್ಷ ರವಿ ಡಿ. ಚನ್ನಣ್ಣನವರ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದ ನಂತರ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಆದರೆ, ನಂತರ ಈ ವರ್ಗಾವಣೆ ಆದೇಶಕ್ಕೆ ತಡೆ ನೀಡಿತ್ತು. ಈ ಹಿಂದೆ ಸಿಐಡಿ ಎಸ್ಪಿ ಆಗಿಯೂ ಕಾರ್ಯನಿರ್ವಹಿಸಿದ್ದ ಚನ್ನಣ್ಣವರ್ ಹಲವು ಕರ್ತವ್ಯಗಳನ್ನು ನಿಭಾಯಿಸಿದ್ದಾರೆ.
ನಿನ್ನೆಯಷ್ಟೇ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


