ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಸರ್ಕಾರ
ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ಸೇವೆ ಸಲ್ಲಿಸುತ್ತಿದ್ದ ಅಲೋಕ್ ಕುಮಾರ್ ಸೇರಿದಂತೆ ರಾಜ್ಯ ಸರ್ಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ಸೇವೆ ಸಲ್ಲಿಸುತ್ತಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ 1994 ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾಯಿಸಲಾಗಿದ್ದು, ಮುಂದಿನ ಆದೇಶದವರೆಗೂ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ನಿಯೋಜಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಆರ್. ಹಿತೇಂದ್ರ ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ನೇಮಿಸಲಾಗಿದೆ.
ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಉಮೇಶ್ ಕುಮಾರ್ ಅವರನ್ನು ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಇದಲ್ಲದೆ, ಪೊಲೀಸ್ ಕಂಪ್ಯೂಟರ್ ವಿಭಾಗದ ಎಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಸೌಮೇಂದು ಮುಖರ್ಜಿ ಅವರನ್ನು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


