ರಾಷ್ಟ್ರಪತಿ ಮುರ್ಮು ವಿಧವೆ ಎಂಬ ಕಾರಣಕ್ಕೆ ಸಂಸತ್ ಉದ್ಘಾಟನೆಗೆ ಕರೆದಿಲ್ಲ: ಕುಂ.ವೀರಭದ್ರಪ್ಪ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಧವೆ ಎಂಬ ಕಾರಣಕ್ಕೆ ನೂತನ ಸಂಸತ್ ಭವನ ಉದ್ಘಾಟನೆಗೆ ಕರೆದಿಲ್ಲ ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಚಾಮರಾಜನಗರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಧವೆ ಎಂಬ ಕಾರಣಕ್ಕೆ ನೂತನ ಸಂಸತ್ ಭವನ ಉದ್ಘಾಟನೆಗೆ ಕರೆದಿಲ್ಲ ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಅವರು ಶುಕ್ರವಾರ ಹೇಳಿದ್ದಾರೆ.
ಚಾಮರಾಜನಗರದ ಡಾ.ರಾಜ್‍ಕುಮಾರ್ ರಂಗಮಂದಿರದಲ್ಲಿ ಸಾಹಿತಿ ಕೆ.ಶ್ರೀದರ್ ಅವರ ಅವಳಿ ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಕು.ವಿ, ದೇಶದ ಶಕ್ತಿ ಕೇಂದ್ರ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟಿಸಬೇಕಿತ್ತು. ಆದರೆ, ರಾಷ್ಟ್ರಪತಿ ಹಿಂದುಳಿದ ಜಾತಿಯವರಾದ್ದರಿಂದ ಮತ್ತು ಅವರು ವಿಧವೆಯಾಗಿದ್ದರಿಂದ ಶುಭಕಾರ್ಯಕ್ಕೆ ಅಮಂಗಲವೆಂದು ಅವರನ್ನು ಕಾರ್ಯಕ್ರಮದಿಂದ ಪ್ರಧಾನಿ ಮೋದಿ ಹೊರಗಿಟ್ಟರು. ಆದರೆ ಇದನ್ನು ಯಾರೂ ಪ್ರಶ್ನೆ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಂಸತ್ ಈ ದೇಶದ 135 ಕೋಟಿ ಜನರ ಪ್ರತಿನಿಧಿ. ಕೇವಲ ಶೇ. 2 ರಷ್ಟು ಇರುವ ಜನರದಲ್ಲ. ಅದು ದೇಶದ ಸಂಸತ್ತು. ಆದರೆ ಅದರ ಉದ್ಘಾಟನೆಗೆ ರಾಷ್ಟ್ರಪತಿಯವರನ್ನು ಕರೆಯಲಿಲ್ಲ. ಇದನ್ನು ನಾವು ಪ್ರಶ್ನಿಸಲೂ ಇಲ್ಲ ಎಂದರು.
ಕನ್ನಡ ಸಾಹಿತ್ಯ ಪ್ರಶ್ನಿಸುವ ಗುಣ ಹೊಂದಿದೆ. ನಮ್ಮಲ್ಲಿ ಎರಡು ರೀತಿಯ ಲೇಖಕರಿದ್ದಾರೆ. ಒಬ್ಬರು ಉಪದ್ರವಿ ಲೇಖಕರು ಮತ್ತೊಬ್ಬರು ನಿರುಪದ್ರವಿ ಲೇಖಕರು, ಸರ್ಕಾರವನ್ನು ಟೀಕಿಸುವರು, ಸರ್ಕಾರದ ತಪ್ಪನ್ನು ಪ್ರಶ್ನೆ ಮಾಡುವವರು ಉಪದ್ರವಿ ಸಾಹಿತಿಗಳು, ನಮಗೆ ಈಗ ಉಪದ್ರವಿ ಸಾಹಿತಿಗಳ ಅಗತ್ಯವಿದೆ. ಆದರೆ ಕೆಲವರು ಇರುತ್ತಾರೆ 500 ಕೊಟ್ಟರೆ ಇತ್ತ ಕಡೆ, ಜಾಸ್ತಿ ಕೊಟ್ಟರೇ ಅತ್ತಕಡೆ ಎಂಬತವರು ಎಂದರು.
ರಾಜ್ಯದಲ್ಲಿ ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಯಾರನ್ನೂ ಸೋಲಿಸಬೇಕೆಂದುಕೊಂಡಿದ್ದೆವೊ ಅವರು ಸೋತಿದ್ದಾರೆ, ಯಾರು ಗೆಲ್ಲಬೇಕಿತ್ತೋ ಅವರಿಗೆ 130ಕ್ಕೂ ಅಧಿಕ ಸ್ಥಾನ ಕೊಟ್ಟು ಜನ ಗೆಲ್ಲಿಸಿದ್ದಾರೆ. ದೆಹಲಿಯಿಂದ ಬಂದರು, ನಟ-ನಟಿಯರನ್ನು ಕರೆತಂದರೂ ಜನರು ಯಾವುದೇ ಮೋಡಿಗೆ ಒಳಗಾಗಲಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


