ಯುಪಿಎಸ್‌ಸಿ ತೇರ್ಗಡೆ ಹೊಂದಿದವರು ದೇಶ, ಸಮಾಜದ ಪ್ರಗತಿಗೆ ಶ್ರಮಿಸಬೇಕು- ಸಿಎಂ ಸಿದ್ದರಾಮಯ್ಯ
ಯುಪಿಎಸ್‌ಸಿ ತೇರ್ಗಡೆ ಹೊಂದಿದವರು ದೇಶ, ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಬೆಂಗಳೂರು: ಯುಪಿಎಸ್‌ಸಿ ತೇರ್ಗಡೆ ಹೊಂದಿದವರು ದೇಶ, ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಡಾ.ರಾಜ್ ಕುಮಾರ್ ಅಕಾಡೆಮಿ ಹಮ್ಮಿಕೊಂಡಿದ್ದ 2022ರ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ರಾಜ್ಯದ ಅಭ್ಯರ್ಥಿಗಳ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ಜಾತಿ ತಾರತಮ್ಯದ ಕಾರಣದಿಂದ ಶಿಕ್ಷಣದಿಂದ ವಂಚಿತರಾದವರು ಬಹಳಷ್ಟು ಜನರಿದ್ದಾರೆ. ಅವರಿಗೆ ಶಿಕ್ಷಣದ ಜೊತೆಗೆ ಬದುಕಿನ ಅವಕಾಶಗಳೂ ದೊರಕುವುದಿಲ್ಲ. ಯುಪಿಎಸ್‌ಸಿ ನಲ್ಲಿ ತೇರ್ಗಡೆ ಹೊಂದಿದವರು ಈ ಅಸಮಾನತೆ ಮತ್ತು ಜಾತಿ ವ್ಯವಸ್ಥೆಯನ್ನು ಅಳಿಸುವ ಮೂಲಕ ದೇಶದ ಮತ್ತು ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಇದೇ ವೇಳೆ ಡಾ. ರಾಜ್ ಕುಮಾರ್ ಅವರೊಂದಿಗಿನ ಒಡನಾಟ ನೆನಪಿಸಿಕೊಂಡ ಸಿದ್ದರಾಮಯ್ಯ, ನಮ್ ಕಾಡಿನವರು ಎಂದು ಖುಷಿಯಿಂದ ಕರೆಯುತ್ತಿದ್ದರು. ಡಾ.ರಾಜ್ ಕುಮಾರ್ ಅವರದ್ದು ಅತ್ಯಂತ ಸರಳ ವ್ಯಕ್ತಿತ್ವ. ಪ್ರತಿಯೊಬ್ಬರನ್ನೂ ಗೌರವದಿಂದ ಕಾಣುವ ಮೇರು ಸಂಸ್ಕಾರದ ರಾಯಭಾರಿ ಆಗಿದ್ದವರು. ಡಾ.ರಾಜ್ ಅವರ ಬದುಕಿನಿಂದ ನಾವು ಕಲಿಯಬೇಕಾದ್ದು, ರೂಢಿಸಿಕೊಳ್ಳಬೇಕಾದ್ದು ತುಂಬಾ ಇದೆ ಎಂದರು.
ಡಾ.ರಾಜ್ ಕುಮಾರ್ ಅಕಾಡೆಮಿ ಅಪಾರ ಯಶಸ್ಸು ಗಳಿಸಲು ರಾಘವೇಂದ್ರ ರಾಜ್‌ಕುಮಾರ್ ಮತ್ತು ಅಕಾಡೆಮಿ ಸಿಬ್ಬಂದಿಯ ಕೊಡುಗೆ ಅಪಾರ. ಈ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆದು ದೇಶಸೇವೆಯ ಕನಸು ಕಟ್ಟಿಕೊಂಡಿರುವ ಅಸಂಖ್ಯ ಮನಸುಗಳಿಗೆ ಆಸರೆಯಾಗಲಿ ಎಂದು ಹಾರೈಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


