ಸ್ಮಾರ್ಟ್ ಕಾರ್ಡ್ ಬಿಡುಗಡೆ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಭಾನುವಾರ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಭಾನುವಾರ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ವಿಧಾನಸೌಧ ಮುಂಭಾಗ ಶಕ್ತಿ ಯೋಜನೆ ಉದ್ಘಾಟನಾ ಸಮಾರಂಭ ನಡೆಯುತ್ತಿದ್ದು, ಈ ವೇಳೆ ಶಕ್ತಿಯೋಜನೆಯ ಸ್ಮಾರ್ಟ್ ಕಾರ್ಡ್ ಬಿಡುಗಡೆ ಮೂಲಕ ಸಿಎಂ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಿದರು. ಸಮಾರಂಭದಲ್ಲಿ ಸಾಂಕೇತಿಕವಾಗಿ ಐವರು ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದರು.
ಇದೇ ವೇಳೆ ಶಕ್ತಿ ಯೋಜನೆಯ ಲೋಗೋ ಮತ್ತು ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಡುಗಡೆ ಮಾಡಿದರು.
ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಮಧು ಬಂಗಾರಪ್ಪ, ಕೃಷ್ಣಭೈರೇಗೌಡ, ಶಾಸಕ ರಿಜ್ವಾನ್ ಅರ್ಷದ್, ಎಂಎಲ್ಸಿ ಹರಿಪ್ರಸಾದ್, ಸಿಎಸ್ ವಂದಿತಾ ಶರ್ಮಾ, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ.ಪ್ರಸಾದ್, ಕೆಸ ಎಂಡಿ ಅನ್ಬುಕುಮಾರ್, ಬಿಎಂಟಿಸಿ ಎಂಡಿ ಸತ್ಯವತಿ ಉಪಸ್ಥಿತರಿದ್ದಾರೆ.
ಇದನ್ನೂ ಓದಿ: ಕೆಎಸ್ಆರ್ ಟಿಸಿ ಬಸ್ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಸ್ಮಾರ್ಟ್ ಕಾರ್ಡ್ ಕಡ್ಡಾಯ: ಅರ್ಜಿ ಸಲ್ಲಿಸುವುದು ಹೇಗೆ?
ಕಾರ್ಯಕ್ರಮದಲ್ಲಿ ಎರಡು ಬಿಎಂಟಿಸಿ ಬಸ್ ಗಳಿಗೆ ಚಾಲನೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಆಯ್ದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಬಳಿಕ ಅದೇ ಬಸ್ ಗಳಲ್ಲಿ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಟರ್ಮಿನಲ್ 2 ಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಅಲ್ಲಿ ಶೂನ್ಯದರದ ಟಿಕೆಟ್ ವಿತರಣೆ ಮಾಡುವ ಮೂಲಕ ಸಾಂಕೇತಿಕವಾಗಿ ಯೋಜನೆಗೆ ಚಾಲನೆ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


