ರಾಜ್ಯ

ಶಕ್ತಿ ಯೋಜನೆಗೆ ಚಾಲನೆ: ಬಸ್ ಚಲಾಯಿಸಿದ ಕೆಜಿಎಫ್ ಶಾಸಕಿ ರೂಪಕಲಾ

ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸುವ ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆಗೆ ಕೋಲಾರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಭಾನುವಾರ‌ ಕೆಜಿಎಫ್ ಶಾಸಕಿ ರೂಪಕಲಾ ಚಾಲನೆ ನೀಡಿದ್ದು, ಈ ವೇಳೆ ರಾಬರ್ಟಸನ್‌ಪೇಟೆಯ ಕುವೆಂಪು ಬಸ್‌ ನಿಲ್ದಾಣದಿಂದ ಸ್ವಲ್ಪ ದೂರ ಬಸ್ ಚಲಾಯಿಸಿ ನೆರೆದಿದ್ದವರ ಗಮನ ಸೆಳೆದರು.

ಶಕ್ತಿ ಯೋಜನೆಗೆ ಚಾಲನೆ: ಬಸ್ ಚಲಾಯಿಸಿದ ಕೆಜಿಎಫ್ ಶಾಸಕಿ ರೂಪಕಲಾ
ಶಾಸಕಿ ರೂಪಕಲಾ
Published On :

ಕೆಜಿಎಫ್ (ಕೋಲಾರ): ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸುವ ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆಗೆ ಕೋಲಾರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಭಾನುವಾರ‌ ಕೆಜಿಎಫ್ ಶಾಸಕಿ ರೂಪಕಲಾ ಚಾಲನೆ ನೀಡಿದ್ದು, ಈ ವೇಳೆ ರಾಬರ್ಟಸನ್‌ಪೇಟೆಯ ಕುವೆಂಪು ಬಸ್‌ ನಿಲ್ದಾಣದಿಂದ ಸ್ವಲ್ಪ ದೂರ ಬಸ್ ಚಲಾಯಿಸಿ ನೆರೆದಿದ್ದವರ ಗಮನ ಸೆಳೆದರು.

ಶಕ್ತಿ ಯೋಜನೆಗೆ ಶಾಸಕಿ ರೂಪಕಲಾ ಚಾಲನೆ ನೀಡುತ್ತಿದ್ದಂತೆ, ಅಲ್ಲಿದ್ದ ಕಾರ್ಯಕರ್ತರು ಬಸ್ ಚಲಾಯಿಸುವಂತೆ ಕೇಳಿಕೊಂಡಿದ್ದಾರೆ. ಕೊನೆಗೆ ಎಲ್ಲರ ಒತ್ತಾಯಕ್ಕೆ ಮಣಿದ ಶಾಸಕಿ ಬಸ್ ಚಲಾಯಿಸಲು ಮುಂದಾದರು.

ಎರಡು ಬಾರಿ ಗೇರ್ ಸರಿಯಾಗಿ ಬೀಳದ ಕಾರಣ ಬಸ್ಸು ಹಿಮ್ಮುಖವಾಗಿ ಚಲಿಸಿತು. ಸ್ವಲ್ಪದರಲ್ಲಿಯೇ ಹಿಂಭಾಗದಲ್ಲಿದ್ದ ಖಾಸಗಿ ಬಸ್‌ಗೆ ಡಿಕ್ಕಿಯಾಗುವುದು ತಪ್ಪಿತು. ಈ ಸಂದರ್ಭದಲ್ಲಿ ಶಾಸಕಿಗೆ ಬಸ್ಸಿನ ಚಾಲಕ ಮಾರ್ಗದರ್ಶನ ಮಾಡಿದರು.

ನಂತರ ಶಾಸಕಿ ಬಸ್‌ನಲ್ಲಿ ಕುಳಿತು ಸ್ವಲ್ಪ ದೂರ ಪ್ರಯಾಣ ಮಾಡಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.