ರಾಜ್ಯ

ಬೆಚ್ಚಿಬಿದ್ದ ಬೆಂಗಳೂರು: ಹೆತ್ತತಾಯಿ ಕೊಂದು ಸೂಟ್ ಕೇಸ್ ನಲ್ಲಿ ಪೊಲೀಸ್ ಠಾಣೆಗೆ ಶವ ತಂದ ಮಗಳು!

ತಾಯಿಗಿಂತ ದೇವರಿಲ್ಲ ಎಂಬ ಮಾತಿದೆ. ತಾಯಿ ಪ್ರೀತಿಗಾಗಿ ಎಷ್ಟೋ ಜನ ಹಪಹಪಿಸುತ್ತಾರೆ. ಆದರೆ ಇಲ್ಲೊಬ್ಬ ಕ್ರೂರಿ ಮಗಳು ತನ್ನ ಹೆತ್ತ ತಾಯಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ಪ್ಯಾಕ್ ಮಾಡಿ ನೇರವಾಗಿ ಪೊಲೀಸ್ ಠಾಣೆಗೆ ಬಂದಿದ್ದಾಳೆ.‌

ಬೆಚ್ಚಿಬಿದ್ದ ಬೆಂಗಳೂರು: ಹೆತ್ತತಾಯಿ ಕೊಂದು ಸೂಟ್ ಕೇಸ್ ನಲ್ಲಿ ಪೊಲೀಸ್ ಠಾಣೆಗೆ ಶವ ತಂದ ಮಗಳು!
ತಾಯಿಯ ಶವ ತುಂಬಿದ್ದ ಸೂಟ್ ಕೇಸ್
Published On :

ಬೆಂಗಳೂರು: ತಾಯಿಗಿಂತ ದೇವರಿಲ್ಲ ಎಂಬ ಮಾತಿದೆ. ತಾಯಿ ಪ್ರೀತಿಗಾಗಿ ಎಷ್ಟೋ ಜನ ಹಪಹಪಿಸುತ್ತಾರೆ. ಆದರೆ ಇಲ್ಲೊಬ್ಬ ಕ್ರೂರಿ ಮಗಳು ತನ್ನ ಹೆತ್ತ ತಾಯಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ಪ್ಯಾಕ್ ಮಾಡಿ ನೇರವಾಗಿ ಪೊಲೀಸ್ ಠಾಣೆಗೆ ಬಂದಿದ್ದಾಳೆ.‌

ಸೇನಾಲಿ ಸೇನ್ ಎಂಬ 39 ವರ್ಷದ ಮಹಿಳೆ ತನ್ನ 70 ವರ್ಷದ ತಾಯಿ ಬೀವಾ ಪಾಲ್ ನ ಕೊಲೆ ಮಾಡಿದ್ದಾಳೆ. ತಾಯಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿ ಶವ ಹೊತ್ತುಕೊಂಡು ಮಗಳು ಪೊಲೀಸ್ ಠಾಣೆಗೆ ಬಂದಿದ್ದಾಳೆ.

ಸೆನಾಲಿ ಸೇನ್ ಅಮ್ಮ ಮತ್ತು ಅತ್ತೆ ಒಂದೇ ಮನೆಯಲ್ಲಿದ್ದರು. ಇಬ್ಬರೂ ದಿನಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಬೀಗರ ಜಗಳಕ್ಕೆ ಬೇಸತ್ತು ಬೀವಾ ಪೌಲ್ ತನ್ನ ಮಗಳಿಗೆ ನಿದ್ದೆ ಮಾತ್ರೆ ಹಾಕಿ ಸಾಯಿಸುವುದಾಗಿ ಹೇಳಿದ್ದಾಳೆ. ಆದರೆ ಮಗಳೇ ಅಮ್ಮನಿಗೆ ನಿನ್ನೆ ಮುಂಜಾನೆ 20 ಮಾತ್ರೆಗಳನ್ನ ನುಂಗಿಸಿದ್ದಾಳೆ.‌

ನಂತರ ಸುಮಾರು‌ 11 ಗಂಟೆಗೆ ತಾಯಿ ಹೊಟ್ಟೆ ನೋವು ಎಂದಾಗ ಆಸ್ಪತ್ರೆಗೆ ಸೇರಿಸಬೇಕಾದ ಮಗಳು ವೇಲ್ ನಿಂದ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾಳೆ. ಅಷ್ಟೇ ಅಲ್ಲದೇ ಟ್ರ್ಯಾಲಿ ಸೂಟ್ ಕೇಸ್ ನಲ್ಲಿ ತಾಯಿಯನ್ನ ಪ್ಯಾಕ್ ಮಾಡಿ ತಂದೆ ಫೋಟೋ ಜೊತೆಗೆಗಿಟ್ಟು ನೇರವಾಗಿ ಮೈಕೋ ಲೇಔಟ್ ಠಾಣೆಗೆ ಬಂದಿದ್ದಾಳೆ.

ಬಿಳೇಕಹಳ್ಳಿಯ ಎನ್ ಎಸ್ ಆರ್ ಗ್ರೀನ್ ಅಪಾರ್ಟ್ಮೆಂಟ್ ನ ಪ್ಲಾಟ್ ನಿಂದ ಆಟೋದಲ್ಲಿ ಠಾಣೆಗೆ ಬಂದು‌ ಶವದ ಸಮೇತ ಶರಣಾಗಿದ್ದಾಳೆ. ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ‌. ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸೆನಾಲಿ ಸೇನ್‌ಳನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.