ಕೊಪ್ಪಳ: ಕಂಟೇನರ್ಗೆ ಹಿಂಬದಿಯಿಂದ ಕಾರು ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು
ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಕಾರಣ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಮಂಗಳವಾರ ಬೆಳಿಗ್ಗೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕುಷ್ಟಗಿ: ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಕಾರಣ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಮಂಗಳವಾರ ಬೆಳಿಗ್ಗೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಕೋಳೂರು ತಾಂಡಾದ ಚಾಲಕ ಪ್ರವೀಣ ಕುಮಾರ ಭೋಜಪ್ಪ ಚವ್ಹಾಣ (27), ಲೇಬಗೇರಿಯ ಸುರೇಶ ಈರಸಂಗಪ್ಪ ಹಂಡೆವಜೀರ (43) ಮತ್ತು ಗೌರಮ್ಮ ಹನುಮಗೌಡ ಹಂಡೆವಜೀರ (60) ಎಂದು ಗುರುತಿಸಲಾಗಿದೆ.
ಕೊಪ್ಪಳ: ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಕಾರಣ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಮಂಗಳವಾರ ಬೆಳಿಗ್ಗೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಕೋಳೂರು ತಾಂಡಾದ ಚಾಲಕ ಪ್ರವೀಣ ಕುಮಾರ ಭೋಜಪ್ಪ ಚವ್ಹಾಣ (27), ಲೇಬಗೇರಿಯ ಸುರೇಶ ಈರಸಂಗಪ್ಪ ಹಂಡೆವಜೀರ (43) ಮತ್ತು ಗೌರಮ್ಮ ಹನುಮಗೌಡ ಹಂಡೆವಜೀರ (60) ಎಂದು ಗುರುತಿಸಲಾಗಿದೆ.
ದಾವಣಗೆರೆಯಿಂದ ಮರಳಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಇಳಕಲ್ ಕಡೆಗೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಕಾರು ಲಾರಿಯ ಕೆಳಭಾಗಕ್ಕೆ ನುಗ್ಗಿದ್ದು, ಅಪಘಾತದ ಭೀಕರತೆಯನ್ನು ಎತ್ತಿ ತೋರಿಸುವಂತಿತ್ತು. ಕಾರಿನಲ್ಲಿ ಮೂವರು ಮಾತ್ರ ಇದ್ದರು.
ಘಟನಾ ಸ್ಥಳಕ್ಕೆ ಸರ್ಕಲ್ ಇನ್‌ಸ್ಪೆಕ್ಟರ್ ಎನ್.ಆರ್.ನಿಂಗಪ್ಪ, ಸಬ್ ಇನ್‌ಸ್ಪೆಕ್ಟರ್ ಮೌನೇಶ ರಾಠೋಡ ಭೇಟಿ ನೀಡಿದ್ದರು. ಪ್ರಕರಣ ಕುಷ್ಟಗಿ ಠಾಣೆಯಲ್ಲಿ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


